ಮಲ್ಪೆಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿಯರು ಪೊಲೀಸರ ವಶಕ್ಕೆ
ಬಂಧಿತರು ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದರು. ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆದಿದ್ದು, ಆರೋಪಿಗಳ ವಿಚಾರಣೆಯನ್ನು ಮಲ್ಪೆ ಪೊಲೀಸರು ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನದ ಬೆನ್ನಲ್ಲೇ ನಕಲಿ ಆಧಾರ್ ಕಾರ್ಡ್ ಬಳಸಿ ಉಡುಪಿಯ ಮಲ್ಪೆಯಲ್ಲಿ ನೆಲೆಸಿದ್ದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರು ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿ ಬಂದಿದ್ದರು. ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ಘಟನೆ ನಡೆದಿದ್ದು, ವಶಕ್ಕೆ ಪಡೆದುಕೊಂಡಿರುವ ಆರೋಪಿಗಳ ವಿಚಾರಣೆಯನ್ನು ಮಲ್ಪೆ ಪೊಲೀಸರು ನಡೆಸುತ್ತಿದ್ದಾರೆ.
ವಶಕ್ಕೆ ಪಡೆದವರನ್ನು ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಎಂದು ಗುರುತಿಸಲಾಗಿದೆ. ನಕಲಿ ಭಾರತೀಯ ದಾಖಲಾತಿ ಸೃಷ್ಟಿಸಿ ದೇಶಕ್ಕೆ ಪ್ರವೇಶ ಮಾಡಿರುವುದು ಬೆಳಕಿಗೆ ಬಂದಿದ್ದು, ಆರೋಪಿಗಳು ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆರೋಪಿಗಳ ಪೈಕಿ ಕಾಜೋಲ್ ಸಿಕ್ಕಿಂ ಅಗರ್ತಲಾ ವಿಳಾಸದ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿರುವುದು ತಿಳಿದು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳ ಪೈಕಿ ಉಸ್ಮಾನ್ ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿರುವ ಬಗ್ಗೆ ತಿಳಿದುಬಂದಿದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಮಹಮ್ಮದ್ ಮಾಣಿಕ್ ಎಂಬಾತ ಪ್ರಯತ್ನಿಸಿದ್ದ. ಬಾಂಗ್ಲಾದೇಶದ ಇಮಿಗ್ರೆಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆ ವೇಳೆ ಮತ್ತೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ.
ಇತ್ತೀಚೆಗೆಯಷ್ಟೇ ಬೆಂಗಳೂರಿನ ಜಿಗಣಿಯಲ್ಲಿ ಅಕ್ರಮವಾಗಿ ವಾಸವಿದ್ದ ಎರಡು ಪಾಕಿಸ್ತಾನಿ ಕುಟುಂಬವನ್ನು ಪೊಲೀಸರು ಬಂಧಿಸಿದ್ದರು. ಇವರ ಬಂಧನದ ಬಳಿಕ ಹೆಚ್ಚಿನ ತನಿಖೆಗಾಗಿ ಪೊಲೀಸರ 4 ತಂಡಗಳ ರಚನೆ ಮಾಡಿ ವಿವಿಧ ರಾಜ್ಯಗಳಿಗೆ ಕಳುಹಿಸಿಕೊಡಲಾಗಿತ್ತು. ಚೆನ್ನೈ, ದೆಹಲಿ, ಹೈದರಾಬಾದ್ಗೆ ತೆರಳಿದ್ದ ಪೊಲೀಸರ ತಂಡ ಮೆಹದಿ ಫೌಂಡೇಷನ್ ಸಂಪರ್ಕದಲ್ಲಿದ್ದ ಒಟ್ಟು 22 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಬಾಂಗ್ಲಾದೇಶ ಪ್ರದೇಶಗಳ ಬಂಧನವಾಗಿದ್ದು, ದೇಶಕ್ಕೆ ಅಕ್ರಮವಾಗಿ ಒಳನುಸುಳುಕೋರರ ಸಂಖ್ಯೆ ಹೆಚ್ಚಳದ ಆತಂಕಕ್ಕೆ ಕಾರಣವಾಗಿದೆ.