
ದೇವೇಗೌಡರ ಆರೋಗ್ಯ ವಿಚಾರಿಸಿದ ನಿರ್ಮಲಾನಂದನಾಥ ಶ್ರೀ
ಕೆಲ ದಿನಗಳ ಹಿಂದೆ ಜ್ವರ ಮತ್ತು ಸೋಂಕಿನ ಕಾರಣದಿಂದ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ತಂಡದ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿರುವ ಅವರ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಶ್ರೀ ಎಚ್.ಡಿ. ದೇವೇಗೌಡ ಅವರನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶುಕ್ರವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಶ್ರೀಗಳು, ದೇವೇಗೌಡರೊಂದಿಗೆ ಕೆಲಕಾಲ ಮಾತುಕತೆ ನಡೆಸಿ, ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ದೇವೇಗೌಡರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಿ, ಎಂದಿನಂತೆ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಲಿ ಎಂದು ಶ್ರೀಗಳು ಹಾರೈಸಿದರು.
ಕೆಲ ದಿನಗಳ ಹಿಂದೆ ಜ್ವರ ಮತ್ತು ಸೋಂಕಿನ ಕಾರಣದಿಂದ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ತಂಡದ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿರುವ ಅವರ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ತೀವ್ರ ನಿಗಾ ಘಟಕದಿಂದ (ICU) ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ದೇವೇಗೌಡರು ಇನ್ನು ಕೆಲ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ.