ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ: ಮಧು ಬಂಗಾರಪ್ಪ
x
ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ: ಮಧು ಬಂಗಾರಪ್ಪ

ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.


Click the Play button to hear this message in audio format

ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು ವ್ಯಾಕರಣ, ಪದಗಳನ್ನಷ್ಟೇ ಬದಲಾವಣೆ ಮಾಡಲಾಗಿದೆ. ಅಂದರೆ, ತಪ್ಪಿದ್ದನ್ನು ಸರಿ ಮಾಡಲಾಗಿದೆ. ಅದಕ್ಕಾಗಿ ಒಂದು ಪುಟ ಬದಲಾವಣೆ ಮಾಡಲಾಗಿದೆ. ಅದು ಬಿಟ್ಟರೆ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಹೇಳಿದರು.

ಈ ಬಾರಿ ಕಾಂಗ್ರೆಸ್ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಬಹುದು ಎಂಬ ವದಂತಿಗಳು ಹಬ್ಬಿದ್ದವು. ಈ ಹಿಂದೆ ಬಿಜೆಪಿ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿತ್ತು. ಹೀಗಾಗಿ ಹಾಲಿ ಕಾಂಗ್ರೆಸ್ ಸರ್ಕಾರ ಅದನ್ನು ಬದಲಾಯಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಇದಕ್ಕೆ ಪೂರಕವಾಗಿ, ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಸರ್ಕಾರ ಎನ್​​ಇಪಿ ರದ್ದುಪಡಿಸುವ ಬಗ್ಗೆ ಘೋಷಣೆ ಮಾಡಿತ್ತು. ಅದರ ಬದಲಿಗೆ ರಾಜ್ಯದಲ್ಲಿ ಎಸ್​​ಇಪಿ ಅನುಷ್ಠಾನಗೊಳಿಸುವುದಾಗಿಯೂ ಹೇಳಿತ್ತು.ಇದೀಗ ಎಲ್ಲ ಗೊಂದಲಗಳಿಗೆ ಶಿಕ್ಷಣ ಸಚಿವರೇ ತೆರೆ ಎಳೆದಿದ್ದಾರೆ.

Read More
Next Story