ಎಫ್‌ಐಆರ್‌ ಬಳಿಕ ವಿಚಾರಣೆಗೆ ಹಾಜರಾಗಲು ಒಕ್ಕಲಿಗರ ಮಠದ ಸ್ವಾಮೀಜಿಗೆ ಪೊಲೀಸ್‌ ನೊಟೀಸ್
x

ಎಫ್‌ಐಆರ್‌ ಬಳಿಕ ವಿಚಾರಣೆಗೆ ಹಾಜರಾಗಲು ಒಕ್ಕಲಿಗರ ಮಠದ ಸ್ವಾಮೀಜಿಗೆ ಪೊಲೀಸ್‌ ನೊಟೀಸ್

ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಒಕ್ಕಲಿಗರ ಮಠದ ಸ್ವಾಮೀಜಿ ಅವರನ್ನು ಬಿಜೆಪಿ ನಾಯಕರು ಭೇಟಿ ಮಾಡಿದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್‌ ನೀಡಿದ್ದಾರೆ.‌


ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕೆಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ನ.25 ರಂದು ಭಾರತೀಯ ಕಿಸಾನ್‌ ಸಂಘದ ಕಾರ್ಯಕ್ರಮದಲ್ಲಿ ವಕ್ಫ್‌ ವಿಚಾರವಾಗಿ ಮಾತನಾಡುವ ವೇಳೆ ಚಂದ್ರಶೇಖರನಾಥ ಸ್ವಾಮೀಜಿ ವಿವಾದಾತ್ಮಾಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೂ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಉಪ್ಪಾರ ಪೇಟೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಶಾಸಕ ಅಶ್ವತ್ಥನಾರಾಯಣ ಹಾಗೂ ಇತರ ಮುಖಂಡರು ಕೆಂಗೇರಿಯಲ್ಲಿರುವ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಒಕ್ಕಲಿಗ ಸ್ವಾಮೀಜಿಗೆ ಕಿರುಕುಳ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖನಾಥ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿ ಕಿರುಕುಳ ನೀಡಲು ಸರ್ಕಾರ ಮುಂದಾಗಿದೆ. ಸ್ವಾಮೀಜಿಗಳ ಮೇಲೂ ದಬ್ಬಾಳಿಕೆ ಮಾಡುವ ವ್ಯವಸ್ಥಿತ ಸಂಚು ರೂಪಿಸಿದೆ. ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ. ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿರುವುದು ಸಮುದಾಯಕ್ಕೆ ಮಾಡುತ್ತಿರುವ ಅಪಮಾನ ಎಂದು ಟೀಕಿಸಿದ್ದಾರೆ.


Read More
Next Story