
ಒಟ್ಟು 11 ವಿವಿಧ ಶ್ರೇಣಿಯ 'ಕನ್ಸಲ್ಟಂಟ್' (ಸಲಹೆಗಾರ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ.
ಇಸ್ರೋಕ್ಕೆ ಸೇರಿದ ವಾಣಿಜ್ಯ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗ: 2.2 ಲಕ್ಷದವರೆಗೆ ಸಂಬಳ !
ಒಟ್ಟು 11 ವಿವಿಧ ಶ್ರೇಣಿಯ 'ಕನ್ಸಲ್ಟಂಟ್' (ಸಲಹೆಗಾರ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ.
ಬಾಹ್ಯಾಕಾಶ ಕ್ಷೇತ್ರದಲ್ಲಿ ಆಸಕ್ತಿ ಇರುವ ಮತ್ತು ಕೇಂದ್ರ ಸರ್ಕಾರದ ಸ್ವಾಮ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಮಾಡಲು ಬಯಸುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ವಾಣಿಜ್ಯ ವಿಭಾಗವಾದ 'ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್' (NSIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಒಟ್ಟು 11 ವಿವಿಧ ಶ್ರೇಣಿಯ 'ಕನ್ಸಲ್ಟಂಟ್' (ಸಲಹೆಗಾರ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಜನವರಿ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವರ್ಗೀಕರಣ
ಒಟ್ಟು 11 ಹುದ್ದೆಗಳನ್ನು ಮೂರು ವಿಭಾಗಗಳಲ್ಲಿ ಭರ್ತಿ ಮಾಡಲಾಗುತ್ತಿದೆ:
* ಸೀನಿಯರ್ ಕನ್ಸಲ್ಟಂಟ್: 01 ಹುದ್ದೆ
* ಕನ್ಸಲ್ಟಂಟ್: 03 ಹುದ್ದೆಗಳು
* ಯಂಗ್ ಕನ್ಸಲ್ಟಂಟ್: 07 ಹುದ್ದೆಗಳು
ಶೈಕ್ಷಣಿಕ ಅರ್ಹತೆ ಏನು?
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ (BE), ಬಿ.ಟೆಕ್ (B.Tech), ಪದವಿ, ಸಿಎ (CA), ಎಂಬಿಎ (MBA) ಅಥವಾ ಎಂಎ (MA) ಪದವಿಯನ್ನು ಪೂರ್ಣಗೊಳಿಸಿರಬೇಕು. ಆಯಾ ಹುದ್ದೆಗೆ ತಕ್ಕಂತೆ ನಿಗದಿತ ಶೈಕ್ಷಣಿಕ ಅರ್ಹತೆ ಮತ್ತು ಅನುಭವವನ್ನು ಹೊಂದಿರಬೇಕು.
ಆಕರ್ಷಕ ವೇತನ ಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅವರ ಹುದ್ದೆಯ ಶ್ರೇಣಿಗೆ ಅನುಗುಣವಾಗಿ ಮಾಸಿಕ ₹40,000 ದಿಂದ ಗರಿಷ್ಠ 2,20,000 ರೂಪಾಯಿವರೆಗೆ ವೇತನ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಆನ್‌ಲೈನ್ ಅಥವಾ ಆಫ್‌ಲೈನ್ ಎರಡೂ ಮಾದರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಆನ್‌ಲೈನ್ ವಿಧಾನ:
1. ಅಧಿಕೃತ ವೆಬ್‌ಸೈಟ್ [nsilindia.co.in](https://nsilindia.co.in) ಗೆ ಭೇಟಿ ನೀಡಿ.
2. 'Careers' ಅಥವಾ ನೇಮಕಾತಿ ವಿಭಾಗಕ್ಕೆ ಹೋಗಿ ಅಧಿಸೂಚನೆಯನ್ನು ಓದಿ.
3. ಆನ್‌ಲೈನ್ ಅರ್ಜಿ ಲಿಂಕ್ ಮೂಲಕ ಅಗತ್ಯ ಮಾಹಿತಿ ಭರ್ತಿ ಮಾಡಿ ಸಬ್ಮಿಟ್ ಮಾಡಿ.
ಆಫ್‌ಲೈನ್ ವಿಧಾನ:
ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:
ವ್ಯವಸ್ಥಾಪಕರು- ಮಾನವ ಸಂಪನ್ಮೂಲ ಮತ್ತು ಆಡಳಿತ (Manager-HR & Administration), ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್, 11ನೇ ಮಹಡಿ, ಬ್ರಿಗೇಡ್ ರುಬಿಕ್ಸ್, 20, ವಾಚ್ ಫ್ಯಾಕ್ಟರಿ ರಸ್ತೆ, ಹಂತ-1, ಯಶವಂತಪುರ, ಬೆಂಗಳೂರು- 560013.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜನವರಿ 2026

