ಒಲಿಂಪಿಕ್ಸ್ 2024 | ವಿನೇಶ್ ಯಾವತ್ತೂ ದೇಶದ ಚಾಂಪಿಯನ್ : ಸಿಎಂ ಸಿದ್ದರಾಮಯ್ಯ
ಅಧಿಕ ತೂಕದ ಹಿನ್ನೆಲೆಯಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿರುವುದು ದುರದೃಷ್ಟಕರ.
ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಕೇವಲ 100 ಗ್ರಾಂ ತೂಕ ಹೆಚ್ಚಿದ್ದ ಕಾರಣಕ್ಕೆ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಭಾರತದ ಮೊದಲ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲುವ ಕನಸು ಕೂಡ ಭಗ್ನಗೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದು, ಒಲಂಪಿಕ್ಸ್‌ನಿಂದ ಅನರ್ಹಗೊಳಿಸಿರುವುದು ದುರಷ್ಟಕರ ಎಂದು ಹೇಳಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಅಧಿಕ ತೂಕದ ಹಿನ್ನೆಲೆಯಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿರುವುದು ದುರದೃಷ್ಟಕರ. ಆದರೆ ಇದು ಅವರ ಅಸಂಖ್ಯಾತ ಸಾಧನೆ ಮತ್ತು ಭಾರತಕ್ಕೆ ತಂದ ಹೆಮ್ಮೆಯನ್ನು ಕಡಿಮೆ ಮಾಡುವುದಿಲ್ಲ. ಫೋಗಟ್ ದೇಶದ ಚಾಂಪಿಯನ್ ಆಗಿರುತ್ತಾರೆ ಎಂದು ಹೇಳಿದರು.
"ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಡೆದ ದುರದೃಷ್ಟಕರ ಘಟನೆಯ ನಂತರ ವಿನೇಶ್ ಫೋಗಟ್‌ಗೆ ನನ್ನ ಹೃದಯವಿದೆ. ನಿಮ್ಮ ಶಕ್ತಿ, ಸ್ಥಿತಿಸ್ಥಾಪಕತ್ವ ಮತ್ತು ಸಮರ್ಪಣೆ ಯಾವಾಗಲೂ ದೇಶಕ್ಕೆ ಸ್ಫೂರ್ತಿಯಾಗಿದೆ. ಅದು ಯಾವತ್ತು ಕಡಿಮೆ ಆಗುವುದಿಲ್ಲ. ದೃಢವಾಗಿರಿ, ವಿನೇಶ್. ನಾವು ನಿಮ್ಮನ್ನು ಮತ್ತು ನಿಮ್ಮ ಅದ್ಭುತ ಪ್ರಯಾಣವನ್ನು ನಂಬುತ್ತೇವೆ. ನೀವು ಯಾವಾಗಲೂ ನಮ್ಮ ಚಾಂಪಿಯನ್ ಆಗಿರುತ್ತೀರಿ!" ಎಂದು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.