Bangalore News | ಹಸುಗಳ ಕೆಚ್ಚಲು ಕೊಯ್ದು ವಿಕೃತಿ; ಓರ್ವನ ಬಂಧನ
ಬಂಧಿತನನ್ನು ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಏನಿದು ಘಟನೆ?
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ನಡೆದಿದೆ.
ಚಾಮರಾಜಪೇಟೆಯ ಪೆನ್ನನ್ ಮೊಹಲ್ಲಾ ನಿವಾಸಿ ಕರ್ಣ ಎಂಬುವವರು ಸಾಕಿದ್ದ ಎಂಟು ಹಸುಗಳ ಪೈಕಿ ಮೂರು ಹಸುಗಳ ಕೆಚ್ಚಲು ಕೊಯ್ದಿದ್ದು, ರಸ್ತೆಯಲ್ಲಿ ರಕ್ತ ಹರಿದಿದೆ. ಭಾನುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದ ಬಳಿಕ ಹಿಂದೂಪರ ಸಂಘಟನೆಗಳು, ಪ್ರಾಣಪ್ರಿಯರು ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.
ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಪಿ.ಸಿ. ಮೋಹನ್ ಭೇಟಿ ನೀಡಿದ್ದು, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದ್ದರು.