ಸಿಇಟಿಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ: ತಜ್ಞರ ಸಮಿತಿ ರಚನೆ
x

ಸಿಇಟಿಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ: ತಜ್ಞರ ಸಮಿತಿ ರಚನೆ


ಏಪ್ರಿಲ್ 18,19 ರಂದು ನಡೆದ ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿತ್ತು. ಈ ವಿಚಾರವಾಗಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಅವರು ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ.

ಸಿಇಟಿಯಲ್ಲಿ ಔಟ್ ಆಫ್ ಸಿಲಬಸ್‌ನ 50ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ರಾಜ್ಯಾದ್ಯಂತ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತ ಉನ್ನತ ಶಿಕ್ಷಣ ಇಲಾಖೆ ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳ ವಿಚಾರವಾಗಿ ತಜ್ಞರ ಸಮಿತಿ ರಚಿಸಿದೆ.

ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ 4 ವಿಷಯಗಳಿಗೂ ಪ್ರತ್ಯೇಕ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು,ತಕ್ಷಣವೇ ತಜ್ಞರ ಸಮಿತಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

ತಜ್ಞರ ವರದಿ ಬಂದ ಬಳಿಕ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳುವ ಭರವಸೆಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ನೀಡಿದ್ದಾರೆ. ಈ ಮಧ್ಯೆ ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಿರುವ ಪ್ರಶ್ನೆ ಪತ್ರಿಕೆ ಗೊಂದಲದ ಬಗ್ಗೆ ವರದಿ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ.

ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ್ ರಿಂದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸೂಚನೆ ನೀಡಿದ್ದು,ಕೂಡಲೇ ವಿಸ್ತ್ರತ ವರದಿ ನೀಡುವಂತೆ ಕೆಇಎಗೆ ಸೂಚನೆ ನೀಡಲಾಗಿದೆ.

Read More
Next Story