
ಜ.16ರಿಂದ ಹಳ್ಳಿ-ಹಳ್ಳಿಯಲ್ಲಿ ಪಂಚಮಸಾಲಿ ಜಾಗೃತಿ ಸಭೆ: ಜಯಮೃತ್ಯುಂಜಯ ಸ್ವಾಮೀಜಿ
2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ಮಾಡಿದರೆ ಸಿಎಂ ಸಿದ್ದರಾಮಯ್ಯ ಸರ್ಕಾರ ನಮ್ಮ ಮೇಲೆ ಲಾಠಿಚಾರ್ಜ್ ಮಾಡಿದೆ. ಕಾಂಗ್ರೆಸ್ ಪಕ್ಷ ಪಂಚಮಸಾಲಿ ಸಮಾಜಕ್ಕೆ ಬಹಳ ಅಪಮಾನ ಮಾಡಿದೆ ಎಂದು ಸ್ವಾಮೀಜಿ ಹೇಳಿದ್ದಾರೆ
ಜನವರಿ 16ರಿಂದ ಪ್ರತಿ ಹಳ್ಳಿ- ಹಳ್ಳಿಗೂ ತೆರಳಿ ಪಂಚಮಸಾಲಿ ಜಾಗೃತಿ ಸಭೆ ನಡೆಸಲಾಗುವುದು. ಮುಂದಿನ 3 ವರ್ಷ ಹೋರಾಟದ ಮೂಲಕ ಜಾಗೃತಿ ಮೂಡಿಸುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಅವರು ಮಂಗಳವಾರ ವಿಜಯನಗರದ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮನ್ನು ಕೇವಲವಾಗಿ ನಡೆಸಿಕೊಂಡಿದ್ದು, ಬಹಳ ಅಪಮಾನ ಮಾಡಿದೆ. ಮುಂದಿನ ದಿನಗಳಲ್ಲಿ ಹಳ್ಳಿ- ಹಳ್ಳಿಯಲ್ಲಿ ಜಾಗೃತಿ ಮೂಡಿಸಿ ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದೂ ಹೇಳಿದ್ದಾರೆ.
2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ಮಾಡಿದರೆ ನಮ್ಮ ಮೇಲೆ ಲಾಠಿಚಾರ್ಜ್ ಮಾಡಿಸಿದರು. ಸಿಎಂ ಸಿದ್ದರಾಮಯ್ಯ ಸರ್ಕಾರ ನಮ್ಮ ಮೇಲೆ ಲಾಠಿಚಾರ್ಜ್ ಮಾಡಿದೆ. ಕಾಂಗ್ರೆಸ್ ಪಕ್ಷ ಪಂಚಮಸಾಲಿ ಸಮಾಜಕ್ಕೆ ಬಹಳ ಅಪಮಾನ ಮಾಡಿದೆ. ಲಾಠಿಚಾರ್ಜ್ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ಸರ್ಕಾರ ಈವರೆಗೆ ಪಂಚಮಸಾಲಿಗಳ ಕ್ಷಮೆ ಕೇಳಿಲ್ಲ. ಮೀಸಲಾತಿ ಕೊಡಲು ಆಗಲ್ಲ ಎಂದು ಸಿಎಂ ನೇರವಾಗಿ ಹೇಳಿದ್ದಾರೆ. ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರವನ್ನು ಅಧಿಕಾರಕ್ಕೆ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಅವರು ಹೇಳಿದ್ದಾರೆ.
ಲಿಂಗಾಯತ ಪಂಚಮಸಾಲಿ ಸಮುದಾಯದ ಕೋಟಾ ಬೇಡಿಕೆಗೆ ಸಂಬಂಧಿಸಿದಂತೆ ಪಂಚಮಸಾಲಿ ಸಮುದಾಯದ ಸ್ವಾಮೀಜಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಲಾಠಿ ಚಾರ್ಜ್ ನಿಂದ ಹಲವರು ಗಾಯಗೊಂಡಿದ್ದರು.