Federal Interview | ಪಂಚಮಸಾಲಿ ಮೀಸಲಾತಿ ಬೇಡಿಕೆಗೆ ಸಿಎಂ ಸ್ಪಂದಿಸುತ್ತಿಲ್ಲ: ಜಯ ಮೃತ್ಯುಂಜಯ ಸ್ವಾಮೀಜಿ
x

Federal Interview | ಪಂಚಮಸಾಲಿ ಮೀಸಲಾತಿ ಬೇಡಿಕೆಗೆ ಸಿಎಂ ಸ್ಪಂದಿಸುತ್ತಿಲ್ಲ: ಜಯ ಮೃತ್ಯುಂಜಯ ಸ್ವಾಮೀಜಿ

ʼದ ಫೆಡರಲ್ ಕರ್ನಾಟಕʼಕ್ಕೆ Exclusive ಸಂದರ್ಶನ ನೀಡಿದ ಸ್ವಾಮೀಜಿ, ಸಮುದಾಯಕ್ಕೆ 2ಎ ಮೀಸಲಾತಿ ಸಂಬಂಧ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ಕೊಟ್ಟಿದ್ದಾರೆ.


ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಮತ್ತೆ ಜೋರಾಗಲಿದೆ. ಡಿಸೆಂಬರ್ 10ರಂದು ಬೆಳಗ್ಗೆ 10ಗಂಟೆಗೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಸಮುದಾಯದ ಜನರು ಹೋರಾಟ ಮಾಡಲು ನಿರ್ಧರಿಸಿದ್ದು, ಶಾಂತಿಯುತ ಹೋರಾಟಕ್ಕೆ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

'ದ ಫೆಡರಲ್ ಕರ್ನಾಟಕ' ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕು ಎನ್ನುವ ತಮ್ಮ ಮನವಿಗೆ ಸಿದ್ದರಾಮಯ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಅಂದು ರಾಜ್ಯಾದ್ಯಂತ 15,000 ಜನರು ಟ್ರ್ಯಾಕ್ಟರ್​ಗಳಲ್ಲಿ ಬೆಳಗಾವಿಗೆ ಬಂದು ಪ್ರತಿಭಟನೆ ನಡೆಸಲಿದ್ದಾರೆ ಎಂದಿದ್ದಾರೆ.

ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್‌ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಈಗ ಅವರದೇ ಸರ್ಕಾರ ಇರುವುದರಿಂದ ಸರ್ಕಾರವನ್ನು ಓಲೈಕೆ ಮಾಡುವುದಕ್ಕಾಗಿ ಹೋರಾಟದಿಂದ ದೂರ ಇದ್ದಾರೆ . ಸಮಾಜದ ನಾಯಕರಲ್ಲಿ ಯಾವುದೇ ಒಡಕಿಲ್ಲ. ಎಲ್ಲರನ್ನೂ ಜೊತೆಗೆ ತೆಗೆದುಕೊಂಡು ಸಮಾಜಕ್ಕೆ ಸಿಗಬೇಕಾಗಿರುವ ಮೀಸಲಾತಿಯನ್ನು ಪಡೆಯುವ ಹೋರಾಟ ಮಾಡುತ್ತೇವೆ. ಸಮುದಾಯದ ಎಲ್ಲ ನಾಯಕರೊಂದಿಗೆ ಡಿಸೆಂಬರ್ 1 ರಂದು ಸಭೆ ಮಾಡಿ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡುತ್ತೇವೆ ಎಂದು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗಿನ ಸಂದರ್ಶನದ ಸಂಪೂರ್ಣ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ:



Read More
Next Story