ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ಯಾರೀಸ್ ಒಲಂಪಿಕ್ಸ್: ರಾಜ್ಯದ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂ ಮಂಜೂರು ಮಾಡಿದ ಸಿಎಂ

ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ.


Click the Play button to hear this message in audio format

ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ.

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹದಾಯವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ.

ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತದಿಂದ ಒಟ್ಟು 117 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಇವರಲ್ಲಿ 47 ಮಹಿಳಾ ಮತ್ತು 70 ಪುರುಷ ಕ್ರೀಡಾಪಟುಗಳಿದ್ದಾರೆ. ಈ 117 ಕ್ರೀಡಾಪಟುಗಳಲ್ಲಿ ನಮ್ಮ ಕರ್ನಾಟಕದ 9 ಮಂದಿಯೂ ಸೇರಿದ್ದಾರೆ.

ಕರ್ನಾಟಕದಿಂದ ಯಾರೆಲ್ಲ ಭಾಗಿ

ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಒಂಬತ್ತು ಮಂದಿಗೆ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ನಿಂದ ಪ್ರತ್ಯೇಕ ನೆರವು ದೊರೆಯಲಿದೆ ಎಂದು ತಿಳಿಸಿರುವ ಡಾ.ಕೆ.ಗೋವಿಂದರಾಜು ಅವರು ಕ್ರೀಡಾಪಟುಗಳಿಗೆ ಸರ್ಕಾರದ ನೆರವು ದೊರಕಿಸಿಕೊಟ್ಟು ಪ್ರೋತ್ಸಾಹಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಿಎಂ, ‘ಪ್ಯಾರೀಸ್ ಒಲಂಪಿಕ್ಸ್​ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡುತ್ತಿದ್ದೇನೆ.

ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಭೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಅವರುಗಳು ಭಾರತವನ್ನು ಪ್ರತಿನಿಧಿಸುತ್ತಿದ್ದು, ಇದು ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ.

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದು, ಅವರ ಮನವಿಗೆ ಸ್ಪಂದಿಸಿ ಈ ಘೋಷಣೆ ಮಾಡಲಾಗಿದೆ.

ನಾಡಿನ ಕ್ರೀಡಾಪಟುಗಳು ಸೇರಿದಂತೆ ಭಾರತದ ಎಲ್ಲಾ ಕ್ರೀಡಾಳುಗಳು ಪ್ಯಾರಿಸ್ ಒಲಿಂಪಿಕ್‌ನಲ್ಲಿ ಅಮೋಘ ಸಾಧನೆಗೈದು ಭಾರತದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಮನದುಂಬಿ ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Read More
Next Story