ಪರಿಷತ್‌ ಚುನಾವಣೆ | 11 ಅಭ್ಯರ್ಥಿಗಳು ಅವಿರೋಧ ಆಯ್ಕೆ
x

ಪರಿಷತ್‌ ಚುನಾವಣೆ | 11 ಅಭ್ಯರ್ಥಿಗಳು ಅವಿರೋಧ ಆಯ್ಕೆ


ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ 11 ಸ್ಥಾನಗಳ ದೈವಾರ್ಷಿಕ ಚುನಾವಣೆಗೆ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 12 ಅಭ್ಯರ್ಥಿಗಳಿಂದ 27 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಅದರಲ್ಲಿ ಒಂದು ನಾಮಪತ್ರ ತಿರಸ್ಕೃತವಾಗಿದೆ. ಹಾಗಾಗಿ ಉಳಿದ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತರೂಢ ಕಾಂಗ್ರೆಸ್‌ನಿಂದ 7 ಅಭ್ಯರ್ಥಿಗಳು, ಪ್ರತಿಪಕ್ಷ ಬಿಜೆಪಿಯಿಂದ ಮೂವರು ಮತ್ತು ಜೆಡಿಎಸ್‌ನಿಂದ ಒಬ್ಬರು ನಾಮಪತ್ರ ಸಲ್ಲಿಸಿದ್ದರು. ಈ ಮೊದಲು ಪಕ್ಷೇತರ ಅಭ್ಯರ್ಥಿ ಆಸಿಫ್‌ ಪಾಷಾ ಸಹ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರು. ಆಸಿಫ್‌ ಪಾಷಾ ಅವರಿಗೆ ಸೂಚಕರು ಇಲ್ಲದ ಕಾರಣ ಅವರ ನಾಮಪತ್ರ ತಿರಸ್ಕೃತವಾಗಿದೆ.


ಕಾಂಗ್ರೆಸ್‌ನಿಂದ ಸಚಿವ ಎನ್‌.ಎಸ್‌.ಬೋಸರಾಜು, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಕೆ. ಗೋವಿಂದರಾಜು, ಬಿಲ್ಕಿಸ್ ಬಾನೋ, ಜಗದೇವ ಗುತ್ತೇದಾರ್, ಐವನ್ ಡಿಸೋಜಾ ಹಾಗೂ ಎ.ವಸಂತ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯಿಂದ ಮಾಜಿ ಸಚಿವ ಸಿ.ಟಿ.ರವಿ, ಮೇಲ್ಮನೆ ಸದಸ್ಯ ಎನ್. ರವಿಕುಮಾರ್ ಮತ್ತು ಮಾರುತಿರಾವ್ ಮುಳೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಜೆಡಿಎಸ್‌ನಿಂದ ಟಿ.ಎನ್.ಜವರಾಯಿಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅವಿರೋಧ ಆಯ್ಕೆ ನಡೆಯದೇ ಚುನಾವಣೆ ನಡೆಯುವ ಪ್ರಸಂಗ ಬಂದಿದ್ದರೆ, ಜೂ.13ರಂದು ಮತದಾನ ನಡೆಯಬೇಕಿತ್ತು.

Read More
Next Story