ಪೆನ್‌ಡ್ರೈವ್ ಪ್ರಕರಣ| ಪ್ರಜ್ವಲ್ ರೇವಣ್ಣ ಅಮಾನತು: ಹೊರಬಿತ್ತು ಜೆಡಿಎಸ್ ಅಧಿಕೃತ ಆದೇಶ
x

ಪೆನ್‌ಡ್ರೈವ್ ಪ್ರಕರಣ| ಪ್ರಜ್ವಲ್ ರೇವಣ್ಣ ಅಮಾನತು: ಹೊರಬಿತ್ತು ಜೆಡಿಎಸ್ ಅಧಿಕೃತ ಆದೇಶ


ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ‌ ನೂರಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಿ ಜಾತ್ಯಾತೀತ ಜನತಾ ದಳ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಅಧ್ಯಕ್ಷ ಹೆಚ್‌ ಡಿ ದೇವೇಗೌಡರ ಅನುಮೋದನೆ ಮೇರೆಗೆ ಪಕ್ಷದ ಮಹಾ ಕಾರ್ಯದರ್ಶಿ ಕೆ ಆರ್ ಶಿವಕುಮಾರ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಅಮಾನತು ಆದೇಶದಲ್ಲಿ ಏನಿದೆ?

ʻʻಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್ ರೇವಣ್ಣನವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಕ್ಷದ ಘನತೆ ಮತ್ತು ಗೌರವಗಳಿಗೆ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆʼʼ.

"ರಾಜ್ಯದಲ್ಲಿನ ಪ್ರಸ್ತುತ ಕಾಂಗ್ರೆಸ್ ಸರ್ಕಾರ, ಮಹಿಳೆಯರ ಮೇಲೆ ಎಸಗಲಾಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತು ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ಒಂದು ವಿಶೇಷ ತನಿಖಾದಳ (Special InvestigationTeam- SIT) ರಚಿಸಿದೆ ಮತ್ತುಈ ತನಿಖಾದಳ ಈಗಾಗಲೇ ತನ್ನ ಕಾರ್ಯಗಳನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಾವಳಗಳ ಅಡಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್ ರೇವಣ್ಣ ಅವರನ್ನು ತತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ".Read More
Next Story