ಶಾಸಕರಾಗಿ ಆಯ್ಕೆ ಪ್ರಶ್ನಿಸಿದ ಅರ್ಜಿ: ಯತ್ನಾಳಗೆ ಸುಪ್ರೀಂ ನೋಟಿಸ್
x
ಕರ್ನಾಟಕ ಹೈಕೋರ್ಟ್‌

ಶಾಸಕರಾಗಿ ಆಯ್ಕೆ ಪ್ರಶ್ನಿಸಿದ ಅರ್ಜಿ: ಯತ್ನಾಳಗೆ 'ಸುಪ್ರೀಂ' ನೋಟಿಸ್

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದ ಅಬ್ದುಲ್ ಹಮೀದ್ ಮುಶ್ರೀಫ್ ಅವರು ಯತ್ನಾಳ ಆಯ್ಕೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.


Click the Play button to hear this message in audio format

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ್ ಆಯ್ಕೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅಂಗೀಕರಿಸಿದೆ. ಆ ಹಿನ್ನೆಲೆಯಲ್ಲಿ ಶಾಸಕ ಯತ್ನಾಳ್‌ ಅವರಿಗೆ ನ್ಯಾಯಪೀಠ ನೋಟಿಸ್ ಜಾರಿ ಮಾಡಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದ ಅಬ್ದುಲ್ ಹಮೀದ್ ಮುಶ್ರೀಫ್ ಅವರು ಯತ್ನಾಳ್ ಆಯ್ಕೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಕೆಲವು ನ್ಯೂನತೆಗಳನ್ನು ಸರಿಪಡಿಸದೆ ಅರ್ಜಿ ಸಲ್ಲಿಸಲಾಗಿದೆ ಎಂಬ ಕಾರಣಕ್ಕೆ ಅರ್ಜಿದಾರರಿಗೆ ನ್ಯಾಯಪೀಠ 1 ಲಕ್ಷ ರೂ ದಂಡ ವಿಧಿಸಿತ್ತು. ಈ ಆದೇಶ ಪ್ರಶ್ನಿಸಿ ಮುಶ್ರೀಫ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ‌

ಈ ವಿಷಯದ ಬಗ್ಗೆ ಹೈಕೋರ್ಟ್ ಹೆಚ್ಚು ಸಮಗ್ರ ದೃಷ್ಟಿಕೋನದಿಂದ ನೋಡಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಸುಪ್ರೀಂಕೋರ್ಟ್‌ ಪೀಠವು ಮೇಲ್ಮನವಿಯನ್ನು ಅಂಗೀಕರಿಸಿತು. ಆದರೆ, ದಂಡ ವಿಧಿಸಿದ್ದನ್ನು ರದ್ದುಗೊಳಿಸಲು ನಿರಾಕರಿಸಿದೆ.

Read More
Next Story