ಎಸ್ಸಿ ಪಟ್ಟಿಯಿಂದ ನಾಲ್ಕು ಜಾತಿ ಕೈಬಿಡಲು ಕೋರಿಕೆ| ಸರ್ಕಾರಕ್ಕೆ ಹೈಕೋರ್ಟ್‌ ನೊಟೀಸ್‌
x
ಹೈಕೋರ್ಟ್‌

ಎಸ್ಸಿ ಪಟ್ಟಿಯಿಂದ ನಾಲ್ಕು ಜಾತಿ ಕೈಬಿಡಲು ಕೋರಿಕೆ| ಸರ್ಕಾರಕ್ಕೆ ಹೈಕೋರ್ಟ್‌ ನೊಟೀಸ್‌

ಕರ್ನಾಟಕದ ರಾಯಚೂರು ಜಿಲ್ಲೆಯ ಸಿವಿಲ್ ಎಂಜಿನಿಯರ್ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಮಿತ್ರಾ ಎಂಬುವರು ಈ ಸಂಬಂಧ ಪಿಐಎಲ್ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಗುರುವಾರ ಅರ್ಜಿಯ ವಿಚಾರಣೆ ನಡೆಸಿತು.


ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಬೋವಿ, ಕೊರಮ, ಕೊರಚ ಹಾಗೂ ಲಂಬಾಣಿ (ಬಂಜಾರ) ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ಕೈಬಿಡಬೇಕು ಎಂದು ಕೋರಿ ಪಿಐಎಲ್ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಹೈಕೋರ್ಟ್ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ (ಪ್ರತಿವಾದಿಗಳಿಗೆ) ಜಾರಿ ಮಾಡಿದೆ.

ಕರ್ನಾಟಕದ ರಾಯಚೂರು ಜಿಲ್ಲೆಯ ಸಿವಿಲ್ ಎಂಜಿನಿಯರ್ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಮಿತ್ರಾ ಎಂಬುವರು ಈ ಸಂಬಂಧ ಪಿಐಎಲ್ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಗುರುವಾರ ಅರ್ಜಿಯ ವಿಚಾರಣೆ ನಡೆಸಿತು.

ಸೃಶ್ಯ ಜಾತಿಗಳಾಗಿರುವ ಮತ್ತು ಪರಿಶಿಷ್ಟ ಜಾತಿಗೆ ಸೇರದ ಲಂಬಾಣಿ (ಬಂಜಾರ), ಕೊರಮ, ಕೊರಚ ಹಾಗೂ ಬೋವಿ ಜಾತಿಗಳನ್ನು ಕರ್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಈ ರೀತಿ ಮಾಡುವುದು ಸಂವಿಧಾನದ ಪರಿಚ್ಛೇದದ 14, 16, 17, 46, 243 (ಝಡ್), 330, 332, 341 ಮತ್ತು 366ರ ಉಲ್ಲಂಘನೆ. ಈ ನಿರ್ದಿಷ್ಟ ಜಾತಿಗಳನ್ನು ಕರ್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರಿಸಿ, ಹೊರಡಿಸಲಾಗಿರುವ ಆದೇಶ ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಮನವಿಯನ್ನು ಸಂಬಂಧಪಟ್ಟ ಆಯೋಗಕ್ಕೆ ಸಲ್ಲಿಸುವಂತೆ 2020ರ ಫೆ.14 ರಂದು ಆದೇಶಿಸಲಾಗಿತ್ತು. ಅದರಂತೆ ಈ ಮನವಿ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೊಗಕ್ಕೆ ಸಲ್ಲಿಸಬೇಕಾಗಿದ್ದು, ಆಯೋಗವು ಆ ಮನವಿ ಪರಿಶೀಲಿಸಿ ಸಂಬಂಧಪಟ್ಟ ಪ್ರಾಧಿಕಾರವಾದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಕ್ಕೆ ವರದಿ ಸಲ್ಲಿಸಬೇಕೆಂದು ಆದೇಶಿಸಲಾಗಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿಲ್ಲ

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನಿರ್ದೇಶನದ ಅನುಸಾರ ಆಯೋಗಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ಈ ಅರ್ಜಿಯ ಆಧಾರದ ಮೇಲೆ 2020ರ ಮಾರ್ಚ್ 12ಕ್ಕೆ ಆಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಆ ಪತ್ರದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಪರಿಶಿಷ್ಟ ಜಾತಿಯೇತರ ಜಾತಿಗಳು ಎಂದು ಗುರುತಿಸಲಾಗಿರುವ ಜಾತಿಗಳನ್ನು ಕೈ ಬಿಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಕೋರಲಾಗಿತ್ತು.

ಆದರೆ, ಕರ್ನಾಟಕ ಸರ್ಕಾರ ಪ್ರಸ್ತಾವನೆ ಕಳುಹಿಸಿಲ್ಲ. ಇದೇ ಮಾದರಿಯ ಪತ್ರವನ್ನು 2020ರ ಮೇ 14ರಂದು ಆಯೋಗ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಲಾಗಿದೆ. ಈ ಎಲ್ಲ ಬೆಳವಣಿಗೆಗಳ ನಂತರ ಮುಖ್ಯಕಾರ್ಯದರ್ಶಿಗೂ ಮನವಿ ಸಲ್ಲಿಸಿದ್ದೇನೆ ಎಂದು ಅರ್ಜಿದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

Read More
Next Story