
ಮುಖ್ಯಮಂತ್ರಿ ಸಿದ್ದರಾಮಯ್ಯ
ಮತಗಳ್ಳತನದಿಂದ ಗೆದ್ದ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರಲು ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ
ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, "ಚುನಾವಣಾ ಆಯೋಗವು ಇಂದು ಬಿಜೆಪಿಯ ಶಾಖಾ ಕಚೇರಿಯಂತೆ ವರ್ತಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಮಟ್ಟದ ಮತಗಳ್ಳತನ ನಡೆದಿದ್ದು, ಈ ಮೂಲಕ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಅವರಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ, ಅವರು ಕೂಡಲೇ ರಾಜೀನಾಮೆ ನೀಡಬೇಕು," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು 'ಮತಗಳ್ಳತನ' ವಿರೋಧಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
"ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ"
ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, "ಚುನಾವಣಾ ಆಯೋಗವು ಇಂದು ಬಿಜೆಪಿಯ ಶಾಖಾ ಕಚೇರಿಯಂತೆ ವರ್ತಿಸುತ್ತಿದೆ. ಸಂವಿಧಾನದ ಅಡಿಯಲ್ಲಿ ನ್ಯಾಯಬದ್ಧವಾಗಿ ಕಾರ್ಯನಿರ್ವಹಿಸಬೇಕಾದ ಸಂಸ್ಥೆ, ತನ್ನ ನಿಷ್ಪಕ್ಷಪಾತತೆಯನ್ನು ಕಳೆದುಕೊಂಡಿದೆ," ಎಂದು ಆರೋಪಿಸಿದರು. "ರಾಹುಲ್ ಗಾಂಧಿಯವರು ಸಂಪೂರ್ಣ ಅಧ್ಯಯನ ಮಾಡಿ, ದಾಖಲೆಗಳ ಸಮೇತ ದೇಶದ ಜನರ ಮುಂದೆ ಮತಗಳ್ಳತನದ ಸತ್ಯವನ್ನು ಇಟ್ಟಿದ್ದಾರೆ. ಕರ್ನಾಟಕದಿಂದ ಆರಂಭವಾಗಿರುವ ಈ ಪ್ರತಿಭಟನೆಯು ದೇಶಾದ್ಯಂತ ವ್ಯಾಪಿಸಲಿದೆ," ಎಂದು ಅವರು ಎಚ್ಚರಿಸಿದರು.
"ಸೋತಿದ್ದು ಮತಗಳ್ಳತನದಿಂದ, ಜನಾಭಿಪ್ರಾಯದಿಂದಲ್ಲ"
ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ವಂಚನೆಯಿಂದಾಗಿಯೇ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಬೇಕಾಯಿತು ಎಂದು ಪ್ರತಿಪಾದಿಸಿದ ಅವರು, "ವಾಸ್ತವದಲ್ಲಿ ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿತ್ತು. ರಾಜ್ಯದಲ್ಲಿ ನಾವು 14 ಸ್ಥಾನಗಳನ್ನು ಗೆಲ್ಲಬೇಕಿತ್ತು, ಆದರೆ ಮತಗಳ್ಳತನ ಮತ್ತು ಇವಿಎಂ ದುರುಪಯೋಗದಿಂದಾಗಿ ನಾವು ಸೋತೆವು. ಇವಿಎಂ ಬಂದ ನಂತರ ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣ ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದೆ," ಎಂದು ಹೇಳಿದರು.
"ಸಂವಿಧಾನ ವಿರೋಧಿ ಮನುವಾದಿಗಳು ಇಡೀ ಚುನಾವಣಾ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಆದರೆ, ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ," ಎಂದು ಸಿದ್ದರಾಮಯ್ಯ ಗುಡುಗಿದರು.
"ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗಾಗಿ ಚಳವಳಿಯನ್ನು ಆರಂಭಿಸಿದ್ದು, ರಾಜ್ಯದ ಸಮಸ್ತ ಜನತೆ ಈ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಲಿದ್ದಾರೆ," ಎಂದು ಅವರು ಘೋಷಿಸಿದರು.