Modi and Trump Likely to Address UNGA Amid India-US Trade Tensions
x

ಪ್ರಧಾನಿ ನರೇಂದ್ರ ಮೋದಿ

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಶೀಘ್ರದಲ್ಲೇ ಪ್ರಧಾನಿ ಮೋದಿ ಭೇಟಿ

ವರದಿಗಳ ಪ್ರಕಾರ, ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 12 ರಿಂದ 14 ರವರೆಗೆ, ಮಿಜೋರಾಂ ಮತ್ತು ಅಸ್ಸಾಂ ರಾಜ್ಯಗಳ ಜೊತೆಗೆ ಮಣಿಪುರಕ್ಕೂ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ.


ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿದ್ದ ಮಣಿಪುರ ರಾಜ್ಯಕ್ಕೆ, ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹಿಂಸಾಚಾರ ಭುಗಿಲೆದ್ದ ಸುಮಾರು 28 ತಿಂಗಳ ನಂತರ, ಪ್ರಧಾನಿ ಮೋದಿ ಅವರು ಈಶಾನ್ಯದ ಈ ರಾಜ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ.

ವರದಿಗಳ ಪ್ರಕಾರ, ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 12 ರಿಂದ 14 ರವರೆಗೆ, ಮಿಜೋರಾಂ ಮತ್ತು ಅಸ್ಸಾಂ ರಾಜ್ಯಗಳ ಜೊತೆಗೆ ಮಣಿಪುರಕ್ಕೂ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ. ಈ ಭೇಟಿಯ ಸಂದರ್ಭದಲ್ಲಿ, ಅವರು ರಾಜ್ಯದಲ್ಲಿ ಹಲವು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸುವ ನಿರೀಕ್ಷೆಯಿದೆ.

ಪ್ರಧಾನಿ ಮೋದಿ ಅವರು, ರಾಜ್ಯದ ರಾಜಧಾನಿ ಇಂಫಾಲ ಮತ್ತು ಹಿಂಸಾಚಾರದ ಕೇಂದ್ರಬಿಂದುವಾಗಿದ್ದ ಚುರಾಚಾಂದ್‌ಪುರಕ್ಕೂ ಭೇಟಿ ನೀಡುವ ಸಾಧ್ಯತೆಯಿದೆ. ಪ್ರಧಾನಿ ಅವರ ಭೇಟಿಯ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರ ಗಲಭೆ ಹಿನ್ನೆಲೆ

ಮಣಿಪುರದಲ್ಲಿ 2023ರ ಮೇ 3 ರಂದು, ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವೆ ಜನಾಂಗೀಯ ಹಿಂಸಾಚಾರ ಆರಂಭವಾಗಿ, ರಾಜ್ಯವು ತಿಂಗಳುಗಳ ಕಾಲ ಹೊತ್ತಿ ಉರಿದಿತ್ತು. ಆದರೆ, ಕಳೆದ ಎರಡು ತಿಂಗಳುಗಳಿಂದ ರಾಜ್ಯದಲ್ಲಿ ಯಾವುದೇ ಪ್ರಮುಖ ಹಿಂಸಾಚಾರದ ಘಟನೆಗಳು ವರದಿಯಾಗಿಲ್ಲ.

ಫೆಬ್ರವರಿ 13, 2025 ರಂದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದರಿಂದ, ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿತ್ತು. ಹಿಂಸಾಚಾರ ನಡೆದಾಗಿನಿಂದ, ಪ್ರಧಾನಿ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡದಿರುವುದನ್ನು, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ನಿರಂತರವಾಗಿ ಟೀಕಿಸುತ್ತಲೇ ಬಂದಿತ್ತು. ಈ ಹಿನ್ನೆಲೆಯಲ್ಲಿ, ಪ್ರಧಾನಿ ಅವರ ಈ ಭೇಟಿಯು ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.

Read More
Next Story