POCSO Case| ಬಂಧನ ಭೀತಿಯಿಂದ ಬಿಎಸ್‌ವೈ ಪಾರು: ಜಾಮೀನು ವಿಸ್ತರಿಸಿದ ಹೈಕೋರ್ಟ್
x

POCSO Case| ಬಂಧನ ಭೀತಿಯಿಂದ ಬಿಎಸ್‌ವೈ ಪಾರು: ಜಾಮೀನು ವಿಸ್ತರಿಸಿದ ಹೈಕೋರ್ಟ್


ಪೋಕ್ಸೋ ಪ್ರಕರಣದ ಆರೋಪಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಸಿಐಡಿ ಅಧಿಕಾರಿಗಳು ಆರೋಪ ಪಟ್ಟಿಯನ್ನು (ಚಾರ್ಜ್ ಶೀಟ್) ಗುರುವಾರ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಇಂದು (ಶುಕ್ರವಾರ) ಯಡಿಯೂರಪ್ಪ ಅವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಯಡಿಯೂರಪ್ಪ ಅವರಿಗೆ ಈ ಹಿಂದೆ ನೀಡಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ಶುಕ್ರವಾರ (ಜೂನ್ 28) ಕರ್ನಾಟಕ ಹೈಕೋರ್ಟ್​ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸಿಐಡಿ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ)ಗೆ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಎರಡು ವಾರ ಮುಂದೂಡಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ಜಾಮೀನು ವಿಸ್ತರಣೆ ಮಾಡಿದೆ. ಇದೀಗ ಬಿಎಸ್‌ವೈ ಬಂಧನ ಭೀತಿಯಿಂದ ಪಾರಾಗಿದ್ದಾರೆ.

ಪ್ರಕರಣದ ಹಿನ್ನೆಲೆ

ಮಾರ್ಚ್‌ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು. ದೂರಿನಲ್ಲಿ, ತಮ್ಮ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ. ಹಾಗಾಗಿ, ಫೆ. 2ರಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿ ಸಮಸ್ಯೆ ಹೇಳಿಕೊಳ್ಳಲು ಹೋಗಿದ್ದೆವು. ಈ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

Read More
Next Story