ಹುಬ್ಬಳ್ಳಿಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ ವಿರುದ್ಧ ಪೋಕ್ಸೋ ಕೇಸ್: 6 ವರ್ಷದ ಬಾಲಕಿಗೆ ದೌರ್ಜನ್ಯ
x

ಹುಬ್ಬಳ್ಳಿಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್‌ ವಿರುದ್ಧ ಪೋಕ್ಸೋ ಕೇಸ್: 6 ವರ್ಷದ ಬಾಲಕಿಗೆ ದೌರ್ಜನ್ಯ

ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕಾನ್‌ಸ್ಟೇಬಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಾಲಕಿಯ ತಂದೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.


ಹುಬ್ಬಳ್ಳಿ: ರಕ್ಷಣೆ ನೀಡಬೇಕಾದ ಆರಕ್ಷಕನೇ ಭಕ್ಷಕನಾದd ಆತಂಕಕಾರಿ ಘಟನೆಯೊಂದು ಹುಬ್ಬಳ್ಳಿಯಲ್ಲಿ ವರದಿಯಾಗಿದೆ. ನಗರದ ಘಂಟಿಕೇರಿ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಹಜರತ್ ಮಿಟ್ಟೇಖಾನ್ ವಿರುದ್ಧ 6 ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದೆ. ಬಾಲಕಿಯ ತಂದೆ ನೀಡಿರುವ ದೂರಿನ ಅನ್ವಯ ಕಾನ್‌ಸ್ಟೇಬಲ್‌ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾಗ, ಕಾನ್‌ಸ್ಟೇಬಲ್ ಹಜರತ್ ಮಿಟ್ಟೇಖಾನ್ ತಮ್ಮ ಪತ್ನಿಯನ್ನು ಪರಿಚಯಿಸಿಕೊಂಡಿದ್ದ. ನಂತರ, ಆತ ತಮ್ಮ ಪತ್ನಿಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದಲ್ಲದೆ, ತಮ್ಮ 6 ವರ್ಷದ ಮಗಳೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದಾನೆ ಎಂದು ಬಾಲಕಿಯ ತಂದೆ ತಮ್ಮ ದೂರಿನಲ್ಲಿ ವಿವರಿಸಿದ್ದಾರೆ. ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕಾನ್‌ಸ್ಟೇಬಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಾಲಕಿಯ ತಂದೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಈ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಘಂಟಿಕೇರಿ ಪೊಲೀಸರು ಕಾನ್‌ಸ್ಟೇಬಲ್ ಹಜರತ್ ಮಿಟ್ಟೇಖಾನ್ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ.

Read More
Next Story