POCSO Case|‌ ಬಂಧನ ಭೀತಿಯಿಂದ ಯಡಿಯೂರಪ್ಪಗೆ  ತಾತ್ಕಾಲಿಕ ರಿಲೀಫ್
x

POCSO Case|‌ ಬಂಧನ ಭೀತಿಯಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್


ಪೋಕ್ಸೊ ಪ್ರಕರಣದ ಆರೋಪಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶವನ್ನು ಆ. 30 ರವರೆಗೆ ವಿಸ್ತರಣೆ ಮಾಡಿತ್ತು. ಈ ಸಂಬಂಧ ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಪೀಠವು ಮತ್ತೆ ಸೆ. 5 ಕ್ಕೆ ಮುಂದೂಡಿದೆ.

ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದುಕೋರಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಮುಂದೂಡಿದ್ದು, ಬಂಧನದ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಬೆಂಗಳೂರಿನ ಮಹಿಳೆಯೊಬ್ಬರು, ತಮ್ಮ ಪುತ್ರಿಯ ಮೇಲೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ಎಸಗಿದ್ದಾರೆಂದು ಆರೋಪಿಸಿ ಮಾ. 14ರಂದು ಕೇಸ್ ದಾಖಲಿಸಿದ್ದರು. ಆದರೆ, ಆ ಮಹಿಳೆಯು ಇತ್ತೀಚೆಗೆ (ಮೇ 26) ಅನಾರೋಗ್ಯದಿಂದ ನಿಧನರಾಗಿದ್ದರು. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಕರಣವನ್ನು ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು. ಬಳಿಕ ಮತ್ತೆ ವಿಚಾರಣೆ ನಡೆಸಿ ಆಗಸ್ಟ್ 30 ರವರೆಗೆ ಆದೇಶವನ್ನು ವಿಸ್ತರಣೆ ಮಾಡಿತ್ತು. ಅದರಂತೆ ಇಂದು ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ಸೆ. 5 ಕ್ಕೆ ಮುಂದೂಡಿದೆ.

Read More
Next Story