
ದೇವನಹಳ್ಳಿಯಲ್ಲಿ ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 30ಕ್ಕೂ ಹೆಚ್ಚು ಮಂದಿ ವಶಕ್ಕೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲದಲ್ಲಿ ನಡೆದ ಈ ರೇವ್ ಪಾರ್ಟಿ ನಡೆದ ಫಾರ್ಮ್‌ಹೌಸ್ ಪ್ರಭಾವಿ ರಿಯಲ್ ಎಸ್ಟೇಟ್ ಮಾಲೀಕರಿಗೆ ಸೇರಿದೆ ಎಂದು ತಿಳಿದುಬಂದಿದೆ.
ದೇವನಹಳ್ಳಿ ಬಳಿಯ ಕನ್ನಮಂಗಲ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ನಡೆಯುತ್ತಿದ್ದ ಅಕ್ರಮ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿ 30ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದ್ದು, ಮಧ್ಯರಾತ್ರಿಯಿಂದ ಬೆಳಗಿನ ಜಾವದವರೆಗೆ ಈ ಪಾರ್ಟಿ ನಡೆಸಲಾಗಿತ್ತು ಎಂದು ಹೇಳಲಾಗಿದೆ.
ಪೊಲೀಸರ ದಾಳಿ ವೇಳ ಯುವಕ-ಯುವತಿಯರು ಮಾದಕ ವಸ್ತುಗಳು ಹಾಗೂ ಮದ್ಯದ ಅಮಲಿನಲ್ಲಿ ಮೈ ಮರೆತಿದ್ದು ಕಂದು ಬಂದಿದೆ. ವಶಕ್ಕೆ ಪಡೆದವರನ್ನು ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ, ಅವರನ್ನು ಪೊಲೀಸ್ ವ್ಯಾನ್‌ಗಳಲ್ಲಿ ಆಸ್ಪತ್ರೆಗಳಿಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ವರದಿ ಬಳಿಕ ಎಲ್ಲರನ್ನೂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲದಲ್ಲಿ ನಡೆದ ಈ ರೇವ್ ಪಾರ್ಟಿ ನಡೆದ ಫಾರ್ಮ್‌ಹೌಸ್ ಪ್ರಭಾವಿ ರಿಯಲ್ ಎಸ್ಟೇಟ್ ಮಾಲೀಕರಿಗೆ ಸೇರಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಆಲ್ಕೋಹಾಲ್ ಸೇರಿದಂತೆ ಸಾಕಷ್ಟು ಮಾದಕ ದ್ರವ್ಯಗಳು ಕಂಡುಬಂದಿದ್ದು, ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.