Rahul Gandhis decision on leadership change is final: CM rolls new dice
x

ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ

"ನಾಯಕತ್ವ ಬದಲಾವಣೆ ಬಗ್ಗೆ ರಾಹುಲ್ ಗಾಂಧಿ ತೀರ್ಮಾನವೇ ಅಂತಿಮ": ಹೊಸ ದಾಳ ಉರುಳಿಸಿದ ಸಿಎಂ

ರಾಜ್ಯ ರಾಜಕಾರಣದಲ್ಲಿ ಯಾವುದೇ ಗೊಂದಲವಿಲ್ಲ. ನಾಯಕತ್ವ ಬದಲಾವಣೆಯ ಬಗ್ಗೆ ಮಾಧ್ಯಮದವರೇ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.


Click the Play button to hear this message in audio format

ರಾಜ್ಯ ನಾಯಕತ್ವದ ಗೊಂದಲದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಕೆ ನೀಡಿರುವುದು ರಾಜ್ಯ ರಾಜ್ಯಕಾರಣದಲ್ಲಿ ಸಂಚಲನ ಮೂಡಿಸಿದ್ದು, ಎಐಸಿಸಿ ಅಧ್ಯಕ್ಷರ ಅಧಿಕಾರದ ಬಗ್ಗೆ ಮತ್ತೊಮ್ಮೆ ಚರ್ಚೆ ಏರ್ಪಟ್ಟಿದೆ.

ಮೈಸೂರಿನಲ್ಲಿ ಸೋಮವಾರ(ಡಿ.22) ಸಿಎಂ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, " ನಾಯಕತ್ವ ಬದಲಾವಣೆ ವಿಚಾರವನ್ನು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ. ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಒಪ್ಪಬೇಕಾಗಿದ್ದು, ಪಕ್ಷಕ್ಕಿಂತ ಯಾರೂ ದೊಡ್ಡವರಿಲ್ಲ" ಎಂದರು.

ನಾಯಕತ್ವ ಬದಲಾವಣೆ ಮಾಧ್ಯಮಗಳ ಸೃಷ್ಟಿ

ರಾಜ್ಯ ರಾಜಕಾರಣದಲ್ಲಿ ಯಾವುದೇ ಗೊಂದಲವಿಲ್ಲ. ನಾಯಕತ್ವ ಬದಲಾವಣೆಯ ಬಗ್ಗೆ ಮಾಧ್ಯಮದವರೇ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ. ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

ದ್ವೇಷ ಭಾಷಣ ಮಾಡುವವರಿಂದ ಮಾತ್ರ ವಿರೋಧ

ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದ್ದು, ಅದನ್ನು ನಿಯಂತ್ರಸಿ ರಾಜ್ಯದಲ್ಲಿ ಶಾಂತಿ ಹಾಗೂ ಭಾತೃತ್ವ ಕಾಪಾಡಲು ಮಸೂದೆಯನ್ನು ಜಾರಿ ಮಾಡಲಾಗುತ್ತಿದೆ. ದ್ವೇಷ ಭಾಷಣ ಮಾಡುವವರು ಮಾತ್ರ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದಿದ್ದರೆ ಪೊಲೀಸರು ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ಹೆಗಲು ಮಟ್ಟಿಕೊಳ್ಳುವುದು ಏಕೆ? ದ್ವೇಷ ಭಾಷಣ ತಡೆ ಮಸೂದೆ ಕಾಯ್ದೆಯು ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ಎಂದು ಪ್ರಶ್ನಿಸಿದರು.

ಹಣ ಲಪಟಾಯಿಸಿಲ್ಲ

ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು. ಸರ್ಕಾರದಲ್ಲಿ ಹಣವಿಲ್ಲದಿದ್ದರೆ 23 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೊಡಲು ಸಾಧ್ಯವಾಗುತ್ತಿತ್ತೇ ? ಗೃಹಲಕ್ಷ್ಮಿ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗುವಾಗ ಲಪಟಾಯಿಸುವ ಪ್ರಶ್ನೆ ಎಲ್ಲಿಂದ ಉದ್ಭವವಾಗುತ್ತದೆ. ಹಣ ಇನ್ನು ಬಿಡುಗಡೆಯಾಗಿಲ್ಲ ಎಂದು ತಿಳಿಸಿದರು.

ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದರೆ ತಪ್ಪೇನು?

ಮಾಜಿ ಸಚಿವ ಕೆ. ಎನ್. ರಾಜಣ್ಣ ಶನಿವಾರ(ಡಿ.20) ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರಲ್ಲಿ ತಪ್ಪೇನಿಲ್ಲ. ಶಾಸಕ ಕೆ.ಎನ್‌. ರಾಜಣ್ಣನವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಮಾಡಿದ್ದು, ಬೇರೆಯವರು ಮಾಡಿದರು ಎಂಬುದು ಮುಖ್ಯವಲ್ಲ. ಎಸ್.ಎಂ ಕೃಷ್ಣ ಆಗ ಮುಖ್ಯಮಂತ್ರಿಗಳಾಗಿದ್ದರು, ಸರ್ಕಾರ ಮಾಡಿತ್ತು ಎಂದು ಡಿಕೆಶಿಗೆ ಪರೋಕ್ಷವಾಗಿ ಟಾಂಗ್‌ ನೀಡಿದರು.

Read More
Next Story