
ಶಾಸಕರಾದ ಎನ್.ಎ. ಹ್ಯಾರಿಸ್, ರೂಪಾ ಶಶಿಕಲಾ ಹಾಗೂ ಶರತ್ ಬಚ್ಚೇಗೌಡ
ನಿಗಮ ಮಂಡಳಿ ಅಧ್ಯಕ್ಷರ ಅವಧಿ ವಿಸ್ತರಣೆ: 25 ಹಾಲಿ ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ಅಭಾದಿತ
2026 ಜ. 26 ಕ್ಕೆ ಎರಡು ವರ್ಷಗಳ ಅವಧಿ ಮುಗಿದ ಹಿನ್ನೆಲೆ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತಾರೋ ಅಥವಾ ಮುಂದುವರೆಸುತ್ತಾರೋ ಎಂಬ ಕುತೂಹಲ ಹಲವರಲ್ಲಿತ್ತು. ಈಗ ಸರ್ಕಾರ ಮುಂದುವರೆಸುವ ನಿರ್ಧಾರ ಕೈಗೊಂಡಿದೆ.
ಕರ್ನಾಟಕದ 25 ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಮುಕ್ತಾಯವಾದ ಹಿನ್ನೆಲೆ ಹಾಲಿ ಅಧ್ಯಕ್ಷರನ್ನು ಮುಂದಿನ ಆದೇಶದವರೆಗೂ ಮುಂದುವರೆಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರವು 2024 ಜ. 26 ರಂದು ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಶಾಸಕರನ್ನು ನೇಮಕ ಮಾಡಲಾಗಿತ್ತು. ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿತ್ತು. 2026 ಜನವರಿ 26 ಕ್ಕೆ ಎರಡು ವರ್ಷಗಳ ಅವಧಿ ಮುಗಿದ ಹಿನ್ನೆಲೆ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆಯೋ ಅಥವಾ ಮುಂದುವರೆಸುತ್ತಾರೋ ಎಂಬ ಕುತೂಹಲ ಹಲವರಲ್ಲಿತ್ತು. ಸದ್ಯ ಸರ್ಕಾರ ಮುಂದುವರೆಸುವ ನಿರ್ಧಾರ ಕೈಗೊಂಡಿದೆ.
ಸರ್ಕಾರದ ಅಧಿಸೂಚನೆಯಲ್ಲಿ ಏನಿದೆ?
ನಿಗಮ ಮಂಡಳಿಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಾಸಕರನ್ನೇ ಅಧ್ಯಕ್ಷರಾಗಿ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಜನವರಿ 26 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಮುಂದುವರೆಯಲಿದ್ದಾರೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ಉಲ್ಲೇಖಿಸಿದೆ.
ಸಚಿವ ಸಂಪುಟ ಸ್ಥಾನಮಾನ ಪಡೆದ ಶಾಸಕರು ಯಾರು ?
ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ನಿಯಮಿತ ಅಧ್ಯಕ್ಷ, ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿ. ಎಸ್. ನಾಡಗೌಡ, ವಾಯುವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷ, ಕಾಗವಾಡ ಶಾಸಕ ಭರಮಗೌಡ(ರಾಜು) ಅಲಗೌಡ ಕಾಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಗುಬ್ಬಿ ಶಾಸಕ, ಎಸ್. ಆರ್. ಶ್ರೀನಿವಾಸ (ವಾಸು). ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ, ಬ್ಯಾಡಗಿ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ, ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಶಾಂತಿನಗರದ ಶಾಸಕ ಎನ್.ಎ. ಹ್ಯಾರಿಸ್, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ, ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ, ಬಿಳಗಿ ಶಾಸಕ, ಜಿ.ಟಿ. ಪಾಟೀಲ್, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಪಟ್ಟಿಯಲ್ಲಿದ್ದಾರೆ.
ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ, ಅರಸೀಕೆರೆ ಶಾಸಕ, ಕೆ.ಎಂ.ಶಿವಲಿಂಗೇಗೌಡ, ಧಾರವಾಡ ಪೂರ್ವ ಅಧ್ಯಕ್ಷರು, ಕರ್ನಾಟಕ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಹುಬ್ಬಳ್ಳಿ ಶಾಸಕ, ಅಬ್ಬಯ್ಯ ಪ್ರಸಾದ್, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ ಅಧ್ಯಕ್ಷ, ಸಾಗರ ಶಾಸಕ, ಬಿ.ಕೆ. ಗೋಪಾಲಕೃಷ್ಣ ಬೇಳೂರು, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಅಧ್ಯಕ್ಷ, ಬಂಗಾರಪೇಟೆ ಶಾಸಕ, ಎಸ್.ಎನ್. ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ, ಚಳ್ಳಕೆರೆ ಶಾಸಕ, ಟಿ. ರಘುಮೂರ್ತಿ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ, ಶ್ರೀರಂಗಪಟ್ಟಣ ಶಾಸಕ, ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ಜಂಗಲ್ ಲಾಡ್ಜ್‌ಸ್ ಅಂಡ್ ರೆಸಾರ್ಟ್ಸ್ ಅಧ್ಯಕ್ಷ, ಹೆಗ್ಗಡದೇವನಕೋಟೆ ಶಾಸಕ, ಅನಿಲ್ ಚಿಕ್ಕಮಾದು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷ, ರಾಯಚೂರು ಗ್ರಾಮೀಣ ಶಾಸಕ, ಬಸವನಗೌಡ ದದ್ದಲ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮ ನಿಯಮಿತ ಅಧ್ಯಕ್ಷೆ, ಕಲಬುರುಗಿ ಉತ್ತರ ಶಾಸಕಿ, ಮತಿ ಕನೀಜ್ ಫಾತಿಮಾ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ, ಶೃಂಗೇರಿ ಶಾಸಕ, ಟಿ. ಡಿ. ರಾಜೇಗೌಡ, ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷೆ, ಕೆ.ಜಿ.ಎಫ್ ಶಾಸಕಿ, ರೂಪಕಲಾ, ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ, ಕಾರವಾರ ಶಾಸಕ, ಸತೀಶ್ ಕೃಷ್ಣ ಸೈಲ್, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ, ಹೊಸಕೋಟೆ ಶಾಸಕ, ಶರತ್ ಬಚ್ಚೇಗೌಡ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ, ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಅವರಿಗೆ ಸಚಿವ ಸಂಪುಟ ಸ್ಥಾನಮಾನ ಮುಂದುವರಿಸುವಂತೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅಭಿಜಿನ್ ಬಿ. ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

