
ವಿಧಾನ ಮಂಡಲ ಅಧಿವೇಶನ
Karnataka Legislative Sessions live: ಅಬಕಾರಿ ಇಲಾಖೆ ಲಂಚ ಆರೋಪದ ಚರ್ಚೆ ನಾಳೆಗೆ ಮುಂದೂಡಿಕೆ
ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಜಂಟಿ ಅಧಿವೇಶನದಲ್ಲಿ ಕೇವಲ ಒಂದು ಸಾಲಿನ ಭಾಷಣ ಮಾಡಿ ನಿರ್ಗಮಿಸಿರುವುದು ಈಗ ಆಡಳಿತಾರೂಢ ಕಾಂಗ್ರೆಸ್ ಪಾಲಿಗೆ ಕೇಂದ್ರದ ವಿರುದ್ಧದ ಹೋರಾಟಕ್ಕೆ ಹೊಸ ವೇದಿಕೆ ಒದಗಿಸಿದೆ.
ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭಾಷಣದ ವೇಳೆ ನಡೆದಿದೆ ಎನ್ನಲಾದ ಶಿಷ್ಟಾಚಾರದ ಉಲ್ಲಂಘನೆ ಈಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ವಿಚಾರವು ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದ್ದು, ಉಭಯ ಪಕ್ಷಗಳ ನಡುವಿನ ಪ್ರತಿಷ್ಠೆಯ ಹೋರಾಟವಾಗಿ ಮಾರ್ಪಟ್ಟಿದೆ.
Live Updates
- 27 Jan 2026 10:35 AM IST
ವಿಧಾನಸಭೆ ಕಲಾಪ 3ನೇ ದಿನವೂ ವಾಕ್ಸಮರ
ವಿಧಾನಸಭೆ ಕಲಾಪ 3 ನೇದಿನ ವಾಕ್ಸಮರ ಜೋರಾಗಿದೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆಯುತ್ತಿದೆ. ರಾಜ್ಯಪಾಲರ ಭಾಷಣದ ವೇಳೆ ರಾಜ್ಯಪಾಲರಿಗೆ ಅವಮಾನ ಮಾಡಿದ ಕಾಂಗ್ರೆಸ್ ಶಾಸಕರ ವಿರುದ್ಧ ಕ್ರಮ ಹಾಗು ಅಬಕಾರಿ ಲಂಚದ ಬಗ್ಗೆ ಪ್ರತಿಪಕ್ಷಗಳು ಪ್ರಸ್ತಾಪಿಸಿ ವಾಕ್ಸಮರ ನಡೆಯಿತು
Next Story

