Heavy rains in coastal districts for four days, Meteorological Department forecast
x
ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. 

Karnataka Rain| ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 7ರಿಂದ 09 ತನಕ ಮುಂಗಾರು ಮಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚುರುಕಾಗಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ.

ಮಳೆಯ ಅಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರಿನ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಮತ್ತು ಮೈಸೂರು, ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ, ಹಗುರದಿಂದ ಸಾಧಾರಣ ಮಳೆ, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಳುವ ಸಾಧ್ಯತೆ ಇದೆ.

ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆ, ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More
Next Story