Power is secure now and in the future, Congress will return to power in 2028: CM promises
x

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಬೆಳ್ಳಿ ಗದೆ ನೀಡಿ ಸನ್ಮಾನಿಸಲಾಯಿತು.

ಮುಂದೆಯೂ ಅಧಿಕಾರ ಭದ್ರ; 2028ಕ್ಕೆ ಮತ್ತೆ ಕಾಂಗ್ರೆಸ್‌ ಸರ್ಕಾರ- ಸಿಎಂ ಭರವಸೆ

ನಮ್ಮ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ʼನವೆಂಬರ್ ಕ್ರಾಂತಿʼ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


Click the Play button to hear this message in audio format

ಮುಂದಿನ ಎರಡೂವರೆ ವರ್ಷದಲ್ಲಿ ಜನರಿಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ(ನ.20) ಚಾಮರಾಜನಗರದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡುತ್ತಿದ್ದೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಲಾಗುತ್ತಿತ್ತು. ಅದು ಸುಳ್ಳು. ಇಂದಿಗೂ , ಭವಿಷ್ಯದಲ್ಲೂ ಕಾಂಗ್ರೆಸ್‌ ಅಧಿಕಾರ ಭದ್ರವಾಗಿರುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳನ್ನು ಸಮನಾಗಿ ಕಂಡು, ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದರು.

2028 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ

ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಐದು ವರ್ಷ ಆಡಳಿತ ನಡೆಸುವಂತೆ ಜನಾದೇಶ ಬಂದಿದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದ್ದರು. ಜನರ ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನಃ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದರು.

ಸಂಪುಟ ಪುನಾರಚನೆ, ವರಿಷ್ಠರ ತೀರ್ಮಾನ

ಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿವೆ. ಸಂಪುಟ ಪುನಾರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು.

ಜನರು ಅಪೇಕ್ಷಿಸುವವರೆಗೆ ಬಜೆಟ್ ಮಂಡನೆ

2028 ರ ಚುನಾವಣೆಯ ಬಗ್ಗೆ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಜನರು ಎಲ್ಲಿಯವರೆಗೂ ಅಪೇಕ್ಷಿಸುವರೋ, ಅಲ್ಲಿಯವರೆಗೂ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ನಡೆದ ಹಣ ದರೋಡೆ ಬಗ್ಗೆ ಸುಳಿವು ಸಿಕ್ಕಿದ್ದು, ಘಟನೆಗೆ ಬಳಸಿದ ಕಾರು ಪೊಲೀಸರಿಗೆ ದೊರಕಿದೆ. ಬ್ಯಾಂಕ್ ದರೋಡೆಯ ಅಪರಾಧಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಮಾಹಿತಿ ನೀಡಿದರು.

Read More
Next Story