ಭಾರತಕ್ಕೆ ಬರಲು ಫ್ಲೈಟ್‌ ಏರಿದ ಪ್ರಜ್ವಲ್| ಏರ್‌ಪೋರ್ಟ್‌ನಲ್ಲಿ ಬಂಧಿಸಲು ಎಸ್‌ಐಟಿ ಸಜ್ಜು
x

ಭಾರತಕ್ಕೆ ಬರಲು ಫ್ಲೈಟ್‌ ಏರಿದ ಪ್ರಜ್ವಲ್| ಏರ್‌ಪೋರ್ಟ್‌ನಲ್ಲಿ ಬಂಧಿಸಲು ಎಸ್‌ಐಟಿ ಸಜ್ಜು


ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು (ಮೇ 30, ಗುರುವಾರ) ಜರ್ಮನಿಯ ಮ್ಯೂನಿಚ್‌ನಿಂದ ಭಾರತಕ್ಕೆ ಬರಲು ಫ್ಲೈಟ್‌ ಏರಿದ್ದಾರೆ. ತಡರಾತ್ರಿ 11:20ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ಲುಫ್ತಾನ್ಸಾ ಏರ್‌ಲೈನ್ಸ್‌ನ ಬ್ಯುಸಿನೆಸ್‌ ಕ್ಲಾಸ್‌ ಟಿಕೆಟ್‌ ಕಾಯ್ದಿರಿಸಿದ್ದಾರೆ. ಗುರುವಾರ ಮಧ್ಯಾಹ್ನ 3.30ಕ್ಕೆ ಮ್ಯೂನಿಚ್‌ನಿಂದ ಹೊರಟು ಮಧ್ಯರಾತ್ರಿ 11:20ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಮೊದಲು ವಲಸೆ ವಿಭಾಗದ (ಇಮಿಗ್ರೇಷನ್‌) ಅಧಿಕಾರಿಗಳು ಅವರನ್ನು ವಶಕ್ಕೆ ತೆಗೆದುಕೊಂಡು ನಂತರ ಎಸ್‌ಐಟಿಗೆ ಒಪ್ಪಿಸಲಿದ್ದಾರೆ. ಬಂಧನಕ್ಕೆ ಎಸ್‌ಐಟಿ ಅಧಿಕಾರಿಗಳು ಕೆಐಎಎಲ್‌ನಲ್ಲೇ ಬೀಡು ಬಿಟ್ಟಿದ್ದಾರೆ. ಆದರೆ, ಟಿಕೆಟ್‌ ಬುಕ್ಕಿಂಗ್‌ಗೆ ತಮ್ಮ ಮೊಬೈಲ್‌ ಸಂಖ್ಯೆ, ಇ-ಮೇಲ್‌ ವಿಳಾಸ ನಮೂದಿಸಿಲ್ಲ. ಪ್ರಜ್ವಲ್‌, ವಿಚಾರಣೆಗೆ ಹಾಜರಾಗುವ ಮುಂಚೆಯೇ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆಯಲಿದ್ದಾರೆ.

ಪ್ರಜ್ವಲ್ ರೇವಣ್ಣ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ನೀಡಿರುವುದರಿಂದ ಅವರನ್ನು ಬಂಧಿಸಲು ವಿಶೇಷ ತನಿಖಾ ದಳ-ಎಸ್‌ಐಟಿ ಬಂಧಿಸಲು ಸಿದ್ಧತೆ ಮಾಡಿಕೊಂಡಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಕುರಿತು ಬೆಂಗಳೂರು ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಹಾಗೂ ಎಸ್‌ಐಟಿ ಅಧಿಕಾರಿಗಳು ಜಂಟಿ ಸಭೆ ಕರೆದು ಸಿದ್ಧತೆ ಮಾಡಿಕೊಂಡಿದ್ದಾರೆ.

Read More
Next Story