ಪ್ರಜ್ವಲ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
x
ಪ್ರಜ್ವಲ್‌ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶಿಸಿದೆ.

ಪ್ರಜ್ವಲ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.


ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಹೀಗಾಗಿ ಅವರನ್ನು ಇಂದು ಬೆಂಗಳೂರಿನ ಪರಪ್ಪ ನ ಕಾರಾಗೃಹಕ್ಕೆ ಪ್ರಜ್ವಲ್‌ ಅವರನ್ನು ಕರೆದೊಯ್ದಿದ್ದಾರೆ.

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲು ಪಾಲಾಗಿದ್ದಾರೆ. ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು (ಜೂ.18) ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನ್ಯಾಯಾಲಯದ ಮುಂದೆ ಪ್ರಜ್ವಲ್‌ ಅಳಲು

ಪ್ರಜ್ವಲ್‌ ರೇವಣ್ಣ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜಾರುಪಡಿಸಿದ ಸಂದರ್ಭದಲ್ಲಿ ನ್ಯಾಯಾಧೀಶರ ಮುಂದೆ ಅಲವತ್ತುಕೊಂಡ ಘಟನೆ ನಡೆದಿದೆ. ನಾನು ಈಗಾಗಲೇ ಎರಡು ಕೇಸ್‌ಗಳಲ್ಲಿ ಪುರುಷತ್ವ ಪರೀಕ್ಷೆ ಒಪ್ಪಿ ಮಾಡಿಸಿಕೊಂಡಿದ್ದೇನೆ. ಮತ್ತೆ ಮತ್ತೆ ಅದೇ ಪರೀಕ್ಷೆ ಮಾಡಿಸಿಕೊಳ್ಳಲು ಮುಜುಗರವಾಗುತ್ತದೆ. ನನಗೆ ಮುಜುಗರ ಹುಟ್ಟಿಸಲೆಂದೇ ಇದನ್ನು ಮಾಡುತ್ತಿರುವಂತೆ ಕಾಣುತ್ತಿದೆ ಎಂದು ಜಡ್ಜ್‌ ಮುಂದೆ ಅಳಲು ತೋಡಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಡ್ಜ್​, ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಮಾತ್ರ ಮಾಡಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಏನಿದು ಪ್ರಕರಣ

ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನ (ಏ.26)ಕ್ಕೂ ಮುನ್ನ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್​ ವಿಡಿಯೋಗಳ ಪೆನ್​ಡ್ರೈವ್​ ಹಾಸನ ಜಿಲ್ಲೆಯಲ್ಲಿ ಹರಿದಾಡಲು ಆರಂಭಿಸಿತು. ಈ ಸಂಬಂಧ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ನಡುವೆ ತಮ್ಮ ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆ ನರಸೀಪುರ ಪೊಲೀಸ್​ ಠಾಣೆಯಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

Read More
Next Story