ಪ್ರಜ್ವಲ್‌ ಪ್ರೆನ್‌ಡ್ರೈವ್ ಪ್ರಕರಣ‌ದಲ್ಲಿ ಮೊದಲ ಬಂಧನ
x

ಪ್ರಜ್ವಲ್‌ ಪ್ರೆನ್‌ಡ್ರೈವ್ ಪ್ರಕರಣ‌ದಲ್ಲಿ ಮೊದಲ ಬಂಧನ

ಮಹಿಳೆಯೊಬ್ಬರು ಕಾಣೆಯಾಗಿದ್ದು, ಅವರನ್ನು ಹೆಚ್‌ ಡಿ ರೇವಣ್ಣ ಅಪಹರಿಸಿದ್ದಾರೆ ಎಂದು ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ʻʻಅಶ್ಲೀಲ ವಿಡಿಯೋ ವಿವಾದದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆʼʼ ಎಂದು ದೂರುದಾರರು ನೀಡಿರುವ ದೂರಿನಲ್ಲಿ ಹೇಳಿದ್ದರು.


ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ ಐಟಿ, ಶುಕ್ರವಾರ ಬೆಳಿಗ್ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಂಧನ ಮಾಡಿದೆ.

ಮೈಸೂರಿನ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಜೆಡಿಎಸ್‌ ನಾಯಕ, ಶಾಸಕ ಎಚ್‌ ಡಿ ರೇವಣ್ಣ ವಿರುದ್ಧ ಮಹಿಳೆಯೊಬ್ಬರನ್ನು ಅಪಹರಿಸಿರುವ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರೇವಣ್ಣರನ್ನು ಆರೋಪಿ ನಂಬರ್‌ 1 ಎಂದೂ, ರೇವಣ್ಣ ಆಪ್ತ ಸತೀಶ್ ಬಾಬು ಎಂಬವರನ್ನು ಆರೋಪಿ 2 ಎಂದೂ ನಮೂದಿಸಲಾಗಿದೆ. ಸದ್ಯ ಆರೋಪಿ ಸತೀಶ್‌ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯೊಬ್ಬರು ಕಾಣೆಯಾಗಿದ್ದು, ಅವರನ್ನು ಹೆಚ್‌ ಡಿ ರೇವಣ್ಣ ಅಪಹರಿಸಿದ್ದಾರೆ ಎಂದು ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ʻʻಅಶ್ಲೀಲ ವಿಡಿಯೋ ವಿವಾದದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆʼʼ ಎಂದು ದೂರುದಾರರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಹೆಚ್‌ ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ನಂಬರ್‌ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ 2 ಎಂದೂ ನಮೂದಿಸಲಾಗಿದೆ.

ದೂರಿನಲ್ಲಿ ಏನಿದೆ?

ಹೊಳೇನರಸಿಪುರದ ರೇವಣ್ಣ ಮನೆಯಲ್ಲಿ ಸಂತ್ರಸ್ತ ಮಹಿಳೆ ಸುಮಾರು 6 ವರ್ಷ ಕೆಲಸ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ಸತೀಶ್ ಎಂಬುವವರು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಭವಾನಿ ಅಕ್ಕ ಕರೆಯುತ್ತಿದ್ದಾರೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ʻʻನನ್ನ ತಾಯಿಯನ್ನು ಹೊಳೆನರಸಿಪುರಕ್ಕೆ ಕರೆದುಕೊಂಡು ಹೋದರು. ಚುನಾವಣೆಯ ದಿವಸ ಬೆಳಿಗ್ಗೆ ನನ್ನ ತಾಯಿಯನ್ನು ಸತೀಶ್ ವಾಪಸ್ಸು ಕರೆದುಕೊಂಡು ಬಂದು ಬಿಟ್ಟರು. ನನ್ನ ತಂದೆ ಮತ್ತು ತಾಯಿಗೆ, ‘ಪೊಲೀಸ್ ಬಂದರೆ ಏನು ಹೇಳಬೇಡಿ. ಅವರಿಗೆ ಸಿಗಬೇಡಿ, ನಿಮ್ಮ ಮೇಲೆ ಕೇಸ್ ಆಗುತ್ತದೆ. ಬಂದರೆ ನನಗೆ ತಿಳಿಸಿ ನಾನು ಬಂದು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದರುʼʼ ಎಂದು ದೂರಿನಲ್ಲಿ ತಿಳಿಸಲಾಗಿದೆ.

ʻʻಏಪ್ರಿಲ್ 29ರಂದು 9 ಗಂಟೆಗೆ, ‘ನಿಮ್ಮ ತಾಯಿ ಪೊಲೀಸಿನವರಿಗೆ ಸಿಕ್ಕಿ ಹಾಕಿಕೊಂಡರೆ ಕೇಸು ಆಗುತ್ತದೆ. ಮತ್ತೆ ನೀವು ಸಹ ಜೈಲಿಗೆ ಹೋಗಬೇಕಾಗುತ್ತದೆ. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ನನ್ನ ತಾಯಿಗೆ ಹೇಳಿ ನನ್ನ ತಾಯಿಯನ್ನು ಒತ್ತಾಯ ಮಾಡಿಕೊಂಡು ಕರೆದುಕೊಂಡು ಹೋದರು. ಸತೀಶ್ ಅವರ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕಿನಲ್ಲಿ ಕರೆದುಕೊಂಡು ಹೋದರು. ನನ್ನ ತಾಯಿಯನ್ನು ಎಲ್ಲಿಗೆ ಕರೆದುಕೊಂಡು ಹೋದರು ಎಂಬುದು ನಮಗೆ ಗೊತ್ತಿಲ್ಲ. ಮೇ 1 ರಂದು ನಮ್ಮ ತಾಯಿ ವಿಡಿಯೋ ಬಗ್ಗೆ ಸ್ನೇಹಿತರಿಂದ ನನಗೆ ಮಾಹಿತಿ ಸಿಕ್ಕಿತು. ನಿನ್ನ ಅಮ್ಮನ ಕಾಲು ಕಟ್ಟಿ ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಹೇಳಿದರು. ಈ ಬಗ್ಗೆ ದೊಡ್ಡ ಕೇಸಾಗಿರುವುದಾಗಿ ನನಗೆ ತಿಳಿಸಿದರು. ನಂತರ ನಾನು ರಾತ್ರಿ ಫೋನ್ ಮಾಡಿ ನನ್ನ ತಾಯಿ ಬಗ್ಗೆ ವಿಚಾರಿಸಿದೆ. ನನ್ನ ತಾಯಿಯನ್ನು ವಾಪಾಸು ಕರೆದುಕೊಂಡು ಬರುವಂತೆ ಹೇಳಿದೆ. ಆದರೆ ಹಲ್ಲೆ ಪ್ರಕರಣದಲ್ಲಿ ನಿಮ್ಮ ತಾಯಿ ಆರೋಪಿ ಅಂತಾ ಸುಳ್ಳು ಹೇಳಿದರು. ನನ್ನ ತಾಯಿಯನ್ನು ಹೆದರಿಸಿ ಒತ್ತಾಯವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆʼʼ ಎಂದು ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯ ಹಾಸನದ ಅಶ್ಲೀಲ ಪೆನ್ಡ್ರೈವ್ ಪ್ರಕರಣ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಬೆಳಕಿಗೆ ಬಂದಿದೆ. ಈ ಪ್ರಕರಣದ ತನಿಖೆಗಾಗಿ ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಿದೆ.

Read More
Next Story