Prajwal Revanna case, important verdict from the Court of Peoples Representatives today
x

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ

ಪ್ರಜ್ವಲ್‌ ರೇವಣ್ಣ ಪ್ರಕರಣ, ಜನಪ್ರತಿನಿಧಿಗಳ ನ್ಯಾಯಾಲಯದಿಂದ ಇಂದು ಮಹತ್ವದ ತೀರ್ಪು

ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದರು.


ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಒಂದರ ತೀರ್ಪನ್ನು ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದರು.

ಇಂದು ತೀರ್ಪು ಪ್ರಕಟಿಸುವ ಮುನ್ನ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಎರಡೂ ಕಡೆಯ ವಕೀಲರಿಂದ ಕೆಲವು ಸ್ಪಷ್ಟೀಕರಣ ಕೇಳಿದ್ಧರು. ಗೂಗಲ್ ಮ್ಯಾಪ್‌ನ್ನು ಸಾಕ್ಷಿಯಾಗಿ ಪರಿಗಣಿಸಿಸಬಹುದೇ? ಸ್ಯಾಮ್​ಸಂಗ್ ಜೆ 4 ಮೊಬೈಲ್ ಸೀಜ್ ಮಾಡಿರುವ ಬಗ್ಗೆಯೂ ಮಾಹಿತಿ ಕೇಳಿ, ಸ್ಪಷ್ಟೀಕರಣ ಅಗತ್ಯವಿರುವುದರಿಂದ ತೀರ್ಪು ಪ್ರಕಟಿಸಲು ಸಾಧ್ಯವಿಲ್ಲ ಎಂದು ಮುಂದೂಡಿಕೆ ಮಾಡಲಾಗಿತ್ತು.

ಪ್ರಜ್ವಲ್ ರೇವಣ್ಣ ಅವರ ತೋಟದ ಮನೆಯಲ್ಲಿ 47 ವರ್ಷದ ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವಿದೆ. ಈ ಸಂಬಂಧ ಸಂತ್ರಸ್ತೆ ಏಪ್ರಿಲ್ 28, 2024 ರಂದು ಹಾಸನದ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈಗಾಗಲೇ 14 ತಿಂಗಳಿನಿಂದ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಒಂದು ವೇಳೆ ಕೋರ್ಟ್​ ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಗುರಿಯಾಗಲಿದ್ದಾರೆ.


Read More
Next Story