ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ದೋಷಿ ಎಂದು ತೀರ್ಪು; ನಟಿ ರಮ್ಯಾ ಮೊದಲ ಪ್ರತಿಕ್ರಿಯೆ
x

ಪ್ರಜ್ವಲ್‌ ರೇವಣ್ಣ ಮತ್ತು ರಮ್ಯಾ

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ದೋಷಿ ಎಂದು ತೀರ್ಪು; ನಟಿ ರಮ್ಯಾ ಮೊದಲ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಶುಕ್ರವಾರ ತೀರ್ಪು ನೀಡಿದ ಬೆನ್ನಲ್ಲೇ, ನಟಿ ಹಾಗೂ ಮಾಜಿ ಸಂಸದೆ ರಮ್ಯಾ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.


ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಶುಕ್ರವಾರ ತೀರ್ಪು ನೀಡಿದ ಬೆನ್ನಲ್ಲೇ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ರಮ್ಯಾ ಹೇಳಿದ್ದೇನು?

ಪ್ರಜ್ವಲ್​​ ರೇವಣ್ಣ ದೋಷಿ ಎಂದು ಕೋರ್ಟ್​​ ತೀರ್ಪು ಪ್ರಕಟಿಸುತ್ತಲೇ ನಟಿ ರಮ್ಯಾ, ಎಕ್ಸ್​​ನಲ್ಲಿ ಪೋಸ್ಟ್‌ ಮಾಡಿದ್ದು, 'Well done HC! Justice served for all the women! (ಕೋರ್ಟ್ ತೀರ್ಪು ಶ್ಲಾಘನೀಯ, ಎಲ್ಲ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರೆತಿದೆ) ಎಂದು ಸತೀಶ್ ಆಚಾರ್ಯ ಅವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29ರಂದು ವಿಚಾರಣೆ ಪೂರ್ಣಗೊಳಿಸಿತ್ತು. ಆಗಸ್ಟ್​​ 1ರಂದು ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದು, ಶನಿವಾರ (ಆಗಸ್ಟ್​​2ರಂದು) ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಘೋಷಿಸಿದ್ದಾರೆ.

ಏನಿದು ಪ್ರಕರಣ ?

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ತೋಟದ ಮನೆಯಲ್ಲಿ 47 ವರ್ಷದ ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವಿತ್ತು. ಈ ಸಂಬಂಧ ಸಂತ್ರಸ್ತೆ 2024ರ ಏಪ್ರಿಲ್ 28ರಂದು ಹಾಸನದ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 24ರಂದು ಎರಡನೇ ಬಾರಿಯೂ ಪ್ರಜ್ವಲ್​​ಗೆ ಜಾಮೀನು ನಿರಾಕರಿಸಿತ್ತು. ಇದಕ್ಕೂ ಮೊದಲು ಪ್ರಜ್ವಲ್‌ ರೇವಣ್ಣ ಜನಪ್ರತಿನಿಧಿಗಳ ನ್ಯಾಯಾಲಯ, ಹೈಕೋರ್ಟ್‌ ಹಾಗೂ ಸುಪ್ರೀಂಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಎಲ್ಲೆಡೆ ಅರ್ಜಿ ವಜಾಗೊಂಡಿತ್ತು. ನಂತರ ಜೂನ್‌ನಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಎರಡನೇ ಬಾರಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ವಿಚಾರಣಾ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿತ್ತು.

ಹೈಕೋರ್ಟ್‌ ಸಲಹೆ ಮೇರೆಗೆ ಎರಡನೇ ಬಾರಿ ವಿಚಾರಣಾ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಎರಡನೇ ಬಾರಿಯೂ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತ್ತು. ಇದೀಗ ಕೋರ್ಟ್‌ ತೀರ್ಪು ಪ್ರಕಟಿಸಿದೆ.

Read More
Next Story