If Pratap Singhs mobile is investigated, he will be sentenced to prison like Prajwal: M. Laxman alleges
x

ಪ್ರತಾಪ್‌ ಸಿಂಹರ ಮೊಬೈಲ್‌ ತನಿಖೆ ನಡೆಸಿದರೆ ಪ್ರಜ್ವಲ್‌ ರೀತಿ ಜೈಲು ಶಿಕ್ಷೆ: ಎಂ. ಲಕ್ಷ್ಮಣ್‌ ಆರೋಪ

ಪ್ರತಾಪ್‌ ಸಿಂಹ ಮೊಬೈಲ್‌ ತನಿಖೆ ಮಾಡಿಸಿದರೆ ಪ್ರಜ್ವಲ್‌ ರೀತಿ ಜೈಲು ಗ್ಯಾರಂಟಿ ; ಎಂ.ಲಕ್ಷ್ಮಣ್‌ ಆರೋಪ

ಪ್ರತಾಪ್‌ ಸಿಂಹ ಅವರ ಮೊಬೈಲ್‌ ಅನ್ನು ಪೊಲೀಸರು ವಶಪಡಿಸಿಕೊಂಡ ಮೊಬೈಲ್‌ನಲ್ಲಿ ನಗ್ನ ಚಿತ್ರಗಳು, ವಿಡಿಯೋಗಳು ಕಂಡು ಬಂದಿದ್ದವು. ಇದನ್ನು ನೋಡಿದ ಗೃಹ ಸಚಿವ ಅಮಿತ್ ಶಾ ಅವರೇ ಗಾಬರಿಗೊಂಡಿದ್ದರು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ತಿಳಿಸಿದ್ದಾರೆ.


2023 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಸಮಯದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮೊಬೈಲ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಮೊಬೈಲ್‌ನಲ್ಲಿರುವ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ನೋಡಿದ ನಂತರವೇ ಬಿಜೆಪಿ ನಾಯಕರು ಲೋಕಸಭಾ ಟಿಕೆಟ್ ನಿರಾಕರಿಸಿದರು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ.

ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ವಶಪಡಿಸಿಕೊಂಡ ಮೊಬೈಲ್‌ನಲ್ಲಿ ನಗ್ನ ಚಿತ್ರಗಳು, ವಿಡಿಯೋಗಳು ಕಂಡು ಬಂದಿದ್ದವು. ಇದನ್ನು ನೋಡಿದ ಸ್ವತಃ ಗೃಹ ಸಚಿವ ಅಮಿತ್ ಶಾ ಅವರೇ ಗಾಬರಿಗೊಂಡಿದ್ದರು. ಈ ಬಗ್ಗೆ ನನ್ನ ಬಳಿ ಆಧಾರಗಳಿವೆ ಎಂದು ತಿಳಿಸಿದ್ದಾರೆ.

ಮಾಜಿ ಸಂಸದರ ಮೊಬೈಲ್ ಫೋನ್‌ನಲ್ಲಿ ಸಂಗ್ರಹವಾಗಿರುವ ಫೋಟೋಗಳು ಮತ್ತು ವಿಡಿಯೊಗಳ ಬಗ್ಗೆ ತನಿಖೆ ನಡೆಸಿದರೆ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಂತೆ ಪ್ರತಾಪ್‌ ಸಿಂಹಗೂ ಕಠಿಣ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ರೀತಿಯಲ್ಲಿಯೇ ಪ್ರತಾಪ್ ಸಿಂಹ ಬಳಿ ವಿಡಿಯೊಗಳಿವೆ. ಅಂತಹ ವಿಡಿಯೊ ಇರುವುದಕ್ಕೆ ಗೃಹ ಸಚಿವರು ಪ್ರತಾಪ್ ಸಿಂಹ ಮೊಬೈಲ್ ಸೀಝ್‌ ಮಾಡಿಸಿದ್ದರು. ಪ್ರತಾಪ್ ಸಿಂಹ ಬಳಿಯಿದ್ದ ಅಶ್ಲೀಲ ವಿಡಿಯೊಗಳು ನನ್ನ ಮೊಬೈಲ್‌ನಲ್ಲೇ ಇವೆ. ಇಂತಹ ಪ್ರತಾಪ್ ಸಿಂಹಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

Read More
Next Story