ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿ ಎನ್‌ಐಎ ವಶಕ್ಕೆ
x

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿ ಎನ್‌ಐಎ ವಶಕ್ಕೆ


ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಹಾಸನ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಎನ್‌ಐಎ ತಂಡ ವಶಕ್ಕೆ ಪಡೆದಿದೆ. ಸುಳ್ಯ ಮೂಲದ ಮುಸ್ತಾಫ್ ಅಲಿಯಾಸ್ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ‌

ಆನೆಮಹಲ್‌ನ ಸಿರಾಜ್‌ ಬಳಿ ಮೊಹಮ್ಮದ್‌ ಮುಸ್ತಾಫಾ ಹಾಗೂ ಇಲಿಯಾಸ್‌ ಕೆಲಸಕ್ಕೆ ಸೇರಿದ್ದರು. ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್‌ನನ್ನು ವಶಕ್ಕೆ ಪಡೆಯಲಾಗಿದೆ. ಪ್ರವೀಣ್‌ ನೆಟ್ಟಾರು ಪ್ರಕರಣದಲ್ಲಿ ಮುಸ್ತಾಫ ಪೈಚಾರ್ (43) ನಾಲ್ಕನೇ ಆರೋಪಿಯಾಗಿದ್ದಾನೆ. ಈತನ ಬಗ್ಗೆ ವಾಟೆಂಟ್‌ ನೋಟಿಸ್‌ ಕೂಡ ಹೊರಡಿಸಲಾಗಿತ್ತು. ಸದ್ಯ ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ರವಾನಿಸಲಾಗಿದೆ.

ಏನಿದು ಪ್ರಕರಣ?

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಕೊಲೆ ನಡೆದಿತ್ತು. ತಮ್ಮ ಕೋಳಿ ಅಂಗಡಿ ಮುಚ್ಚಿ ತೆರಳುವ ವೇಳೆ ಪ್ರವೀಣ್ ನೆಟ್ಟಾರು ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದರು.

ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಹಿಂದೂ ಮುಖಂಡನ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿತ್ತು.

ಪ್ರಕರಣ ರಾಜಕೀಕರಣಗೊಂಡು ರಾಜ್ಯಾದ್ಯಾಂತ ದೊಡ್ಡಪಟ್ಟದ ಸದ್ದು ಮಾಡಿತ್ತು. ಅದರ ಗಂಭೀರತೆ ಅರಿತ ಅಂದಿನ ಸರ್ಕಾರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿತ್ತು. ತನಿಖೆ ಮುಂದುವರಿದಿದ್ದು ಪ್ರಕರಣದ ನಾಲ್ಕನೇ ಆರೋಪಿಯನ್ನು ಬಂಧಿಸಲಾಗಿದೆ.

Read More
Next Story