ಡ್ರಗ್‌ ಮಾಫಿಯಾದಿಂದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು?
x
Drug Mafia

ಡ್ರಗ್‌ ಮಾಫಿಯಾದಿಂದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು?

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಮೃತಪಟ್ಟಿರುವ ಪ್ರಕರಣದಲ್ಲಿ ಔಷಧ ಪೂರೈಕೆ ಮಾಡಿರುವ ಪಶ್ಚಿಮ ಬಂಗಾಳದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿದಲಾಗಿದೆ ಇದೇ ವೇಳೆ ಆಸ್ಪತ್ರಯ ಡ್ರಗ್‌ ಕಂಟ್ರೋಲರ್‌ ಅಮಾನತು ಮಾಡಲಾಗಿದೆ.


ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರು ಮೃತಪಟ್ಟಿರುವುದು ಔಷಧ ಕಂಪನಿಯ ಯಡವಟ್ಟು ಹಾಗೂ ಔಷಧ ನಿಯಂತ್ರಕರ ನಿರ್ಲಕ್ಷ್ಯ ಎಂಬುದು ಮೇಲ್ನೊಟಕ್ಕೆ ಕಂಡು ಬಂದಿದೆ. ಹೀಗಾಗಿ ಶನಿವಾರ ಸಂಜೆಯ ವೇಳಗೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಡ್ರಗ್‌ ಕಂಟ್ರೋಲರ್‌ ಉಮೇಶ್ ಅವರನ್ನುಅಮಾನತು ಮಾಡಲು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಇದೇ ವೇಳೆ ದುರ್ಘಟನೆಗೆ ಕಾರಣವಾಗಿದೆ ಎನ್ನಲಾದ ರಿಂಗರ್‌ ಲ್ಯಾಕ್ಟೇಟ್‌ ಔಷಧ ಪೂರೈಸಿರುವ ಪಶ್ಚಿಮ ಬಂಗಾ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ಆದೇಶಿಸಿದ್ದಾರೆ. ಜತೆಗೆ ಕಂಪನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶಿಸಿದ್ದಾರೆ.


ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ದುರಂತರದ ಕುರಿತಾಗಿ ಕರೆದಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಆದೇಶ ಹೊರಡಿಸಿದ್ದಾರೆ. ಸಭೆಯ ಬಳಿಕ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ.

ಇಂಟ್ರಾವೀನಸ್ ಫ್ಲೂಯಿಡ್ (ಐವಿ) ರಿಂಗಲ್‌ ಲ್ಯಾಕ್ಟೇಟ್ ಸಲ್ಯೂಷನ್ ಬಳಸದಂತೆ ಜಿಲ್ಲಾ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದ್ದರೂ ಬಳ್ಳಾರಿ ಆಸ್ಪತ್ರೆಯಲ್ಲಿ ಈ ದ್ರಾವಣ ಬಳಸಿರುವುದರಿಂದ ಗರ್ಭಿಣಿಯರು ಮೃತಪಟ್ಟಿದ್ದಾರೆ ಎಂದು ತಜ್ಞರ ಸಮಿತಿಯ ವರದಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಇದು ಸಂಪೂರ್ಣವಾಗಿ ನಿರ್ಲಕ್ಷ್ಯದಿಂದ ಉಂಟಾದ ಘಟನೆ ಎಂಬುದನ್ನು ಮನಗಂಡಿರುವ ಸರ್ಕಾರ ಕ್ರಮಕ್ಕೆ ಸೂಚನೆ ನೀಡಿದೆ.

ಸಂತ್ರಸ್ತರಿಗೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಔಧ ಪೂರೈಸಿದ ಕಂಪನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದರು.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಇದೇ ಮಾದರಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲು ನಿರ್ಧಾರಿಸಲಾಗಿದೆ ಎಂದು ಸಿಎಂ ಸಭೆಯ ಬಳಿಕ ಮಾಹಿತಿ ನೀಡಿದರು.

ಏನಿದು ಘಟನೆ?

ನವೆಂಬರ್‌ 11ರಿಂದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಮೃತಪಟ್ಟಿದ್ದರು. ಹಿಮೋಡಯಾಲಿಸಿಸ್‌ ಮತ್ತು ಬಹು ಅಂಗಗಳ ವೈಫಲ್ಯ ಹಾಗೂ ತೀವ್ರತರ ಮೂತ್ರಪಿಂಡದ ವೈಫಲ್ಯದ ತೊಂದರೆಗಳನ್ನು ಎದುರಿಸಿ ಬಾಣಂತಿಯರು ಮೃತಪಟ್ಟಿದ್ದರು. ಅಸ್ವಸ್ಥಗೊಂಡಿರುವ 3ರಲ್ಲಿ ಇಬ್ಬರು ಬಳ್ಳಾರಿ ವಿಮ್ಸ್‌ನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಬಾಣಂತಿಯರಿಗೆ ನೀಡಲಾಗಿರುವ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣದ ಎಲ್ಲಾ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಮಾಡುವ ಚಿಂತನೆಯೂ ಸಭೆಯಲ್ಲಿ ವ್ಯಕ್ತಗೊಂಡಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅದು ಚರ್ಚೆಯಾಗಲಿದೆ.

ಶಿಸ್ತು ಕ್ರಮಕ್ಕೆ ಆದೇಶ

ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಜವಾಬ್ದಾರರಾದ ಪ್ರತಿಯೊಬ್ಬರನ್ನೂ ಗುರುತಿಸಿ ಕ್ರಮ ಕೈಗೊಳ್ಳಬೇಕು. ಡ್ರಗ್‌ ಕಂಟ್ರೋಲರ್‌ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಸಭೆಯಲ್ಲಿ ಆದೇಶ ಮಾಡಲಾಗಿದೆ.

ಔಷಧ ಮಾಫಿಯಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎನ್ನುವ ಅಭಿಪ್ರಾಯಗಳು ಸಭೆಯಲ್ಲಿ ಹಲವರಿಂದ ವ್ಯಕ್ತವಾದವು. ಮೊದಲಿಗೆ ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲು ನಿರ್ಧರಿಸಲಾಯಿತು.

Read More
Next Story