
Actor Darshan Case | ದರ್ಶನ್ ಜಾಮೀನು ತೆರವಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ
ಮಂಗಳವಾರ ಹೈಕೋರ್ಟ್‌ನಲ್ಲಿ ಸ್ಪೆಷಲ್ ಲೀವ್ ಪಿಟಿಷನ್ ಇತ್ಯರ್ಥವಾಗುವ ಸಾಧ್ಯತೆಗಳಿದ್ದು, ಇದಾದ ನಂತರ ದರ್ಶನ್‌ಗೆ ದೊರೆತಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ನಟ ದರ್ಶನ್ ಗೆ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ದತೆ ನಡೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಧ್ಯಂತರ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಕನ್ನಡದಲ್ಲಿರುವ ಪ್ರಕರಣದ ಚಾರ್ಜ್ ಶೀಟ್‌ನ ಪ್ರಮುಖ ಅಂಶಗಳನ್ನು ಇಂಗ್ಲಿಷ್ ಗೆ ತರ್ಜುಮೆ ಗೊಳಿಸಲಾಗುತ್ತಿದೆ. ಮಂಗಳವಾರ ಹೈಕೋರ್ಟ್‌ನಲ್ಲಿ ಸ್ಪೆಷಲ್ ಲೀವ್ ಪಿಟಿಷನ್ ಇತ್ಯರ್ಥವಾಗುವ ಸಾಧ್ಯತೆಗಳಿದ್ದು, ಇದಾದ ನಂತರ ದರ್ಶನ್‌ಗೆ ದೊರೆತಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ. ಕನ್ನಡದಲ್ಲಿರುವ ಮಾಹಿತಿಯನ್ನು ಇಂಗ್ಲೀಷ್ ಗೆ ಭಾಷಾಂತರ ಮಾಡಿ ಸಲ್ಲಿಕೆಗೆ ಸಿದ್ದತೆ ಮಾಡಲಾಗಿದ್ದು ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಕೆಯಾಗಲಿದೆ ಎಂದರು.
ದರ್ಶನ್ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿತ್ತು. ಆ ಬಳಿಕ ಅವರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 30ರಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ, ಆರೋಗ್ಯ ತಪಾಸಣೆಗಾಗಿ ಆರು ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ದರ್ಶನ್ ಅವರು ತುರ್ತು ಸರ್ಜರಿ ಅಗತ್ಯ ಎಂದು ಮಧ್ಯಂತರ ಜಾಮೀನು ಕೇಳಿದ್ದರು. ದರ್ಶನ್ ಮನವಿ ಪರಿಗಣಿಸಿ 6 ವಾರಗಳ ಕಾಲ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆ ಆಧಾರದ ಮೇಲೆ 6 ವಾರಗಳ ಮಧ್ಯಂತರ ಜಾಮೀನು ಸಿಕ್ಕಿದೆ. 19 ದಿನಗಳಾದರೂ ದರ್ಶನ್‌ಗೆ ಸರ್ಜರಿ ಆಗಿಲ್ಲ. ಸದ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ದರ್ಶನ್ ಫಿಜಿಯೋಥೆರಪಿ ನಡೆಯುತ್ತಿದೆ ಎಂದು ತಿಳಿದು ಬಂದಿದೆ.