ಬೆಳಗಾವಿ ಬಳಿ ಖಾಸಗಿ ಬಸ್ ಪಲ್ಟಿ: ಇಬ್ಬರ ದುರ್ಮರಣ, 9 ಮಂದಿಗೆ ಗಾಯ
x

ಬೆಳಗಾವಿ ಬಳಿ ಖಾಸಗಿ ಬಸ್ ಪಲ್ಟಿ: ಇಬ್ಬರ ದುರ್ಮರಣ, 9 ಮಂದಿಗೆ ಗಾಯ

ಸ್ಥಳಕ್ಕೆ ಧಾವಿಸಿದ ಹಿರೇಬಾಗೇವಾಡಿ ಪೊಲೀಸ್ ಠಾಣಾ ಸಿಬ್ಬಂದಿ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.


ಹುಬ್ಬಳ್ಳಿಯಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಮಹಿಳೆ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಾಯಗೊಂಡಿರುವ ಭೀಕರ ಘಟನೆ ಇಂದು ಮುಂಜಾನೆ ನಡೆದಿದೆ.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪದ ಬಡೇಕೊಳ್ಳ ಮಠದ ಘಾಟ್‌ನಲ್ಲಿ, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. 'ಗೋಗಟೆ' ಸಂಸ್ಥೆಗೆ ಸೇರಿದ ಬಸ್, ಚಾಲಕನ ಅಜಾಗರೂಕತೆಯಿಂದಾಗಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಒಟ್ಟು 12 ಪ್ರಯಾಣಿಕರಿದ್ದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಹಿರೇಬಾಗೇವಾಡಿ ಪೊಲೀಸ್ ಠಾಣಾ ಸಿಬ್ಬಂದಿ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More
Next Story