ಡ್ರಗ್ಸ್ ಸಾಗಾಟ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಿಯಾಂಕ್ ಖರ್ಗೆ ಆಪ್ತ ಲಿಂಗರಾಜ್ ಕಣ್ಣಿ
x

ಪ್ರಿಯಾಂಕ್‌ ಖರ್ಗೆ ಆಪ್ತ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನನ್ನು ಕಾಂಗ್ರೆಸ್‌ನಿಂದ ಉಚ್ಛಾಟನೆ ಮಾಡಲಾಗಿದೆ.

ಡ್ರಗ್ಸ್ ಸಾಗಾಟ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಿಯಾಂಕ್ ಖರ್ಗೆ ಆಪ್ತ ಲಿಂಗರಾಜ್ ಕಣ್ಣಿ

ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಅಲ್ಲಿನ ಕಲ್ಯಾಣ ಠಾಣೆ ಪೊಲೀಸರು ಲಿಂಗರಾಜ್ ಕಣ್ಣಿ ಸೇರಿದಂತೆ ಒಟ್ಟು ಮೂರು ಜನರನ್ನು ಬಂಧಿಸಿದ್ದಾರೆ.


ಡ್ರಗ್ಸ್ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪ್ರಿಯಾಂಕ್ ಖರ್ಗೆ ಅವರ ಆಪ್ತ ಲಿಂಗರಾಜ್ ಕಣ್ಣಿಯನ್ನು ಮುಂಬಯಿ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಅಲ್ಲಿನ ಕಲ್ಯಾಣ ಠಾಣೆ ಪೊಲೀಸರು ಲಿಂಗರಾಜ್ ಕಣ್ಣಿ ಸೇರಿದಂತೆ ಒಟ್ಟು ಮೂರು ಜನರನ್ನು ಬಂಧಿಸಿದ್ದಾರೆ. ಬಂಧಿತರ ಬಳಿ ನಿಷೇಧಿತ 120 ಕೊಡೆನೈನ್ ಸಿರಪ್ ಬಾಟಲ್ ಇತ್ತು ಎನ್ನಲಾಗಿದೆ. ಎನ್​ಡಿಪಿಎಸ್ ಕಾಯ್ದೆ ಅಡಿ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣದಲ್ಲಿ ತೌಸಿಫ್‌ ಆಸಿಫ್ ತುರವೇ ಪ್ರಮುಖ ಆರೋಪಿಯಾಗಿದ್ದು, ಲಿಂಗರಾಜ್ ಕಣ್ಣಿ (A2) ಮತ್ತು ಕಲಬುರಗಿಯ ಸಯ್ಯದ್ ಇರ್ಫಾನ್ (A3) ಆರೋಪಿಗಳಾಗಿದ್ದಾರೆ. ಮೂವರನ್ನು ಬಂಧಿಸಿದ ಮುಂಬೈನ ಬಜಾರ್ ಪೇಠ ಪೊಲೀಸರು ಕೋರ್ಟ್​ಗೆ ಹಾಜರು ಪಡಿಸಿದ್ದು, ಮೂವರು ಆರೋಪಿಗಳನ್ನು ಕೋರ್ಟ್​ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಲಿಂಗರಾಜ್ ಕಣ್ಣಿ ಈ ಹಿಂದೆ ಬಿಜೆಪಿಯಲ್ಲಿ ಇದ್ದರು. 2023 ರ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ಸೇರಿದ್ದರು. ಇವರು ಕಲಬುರಗಿ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಆಪ್ತರೂ ಆಗಿದ್ದಾರೆ.

Read More
Next Story