
ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನನ್ನು ಕಾಂಗ್ರೆಸ್‌ನಿಂದ ಉಚ್ಛಾಟನೆ ಮಾಡಲಾಗಿದೆ.
ಡ್ರಗ್ಸ್ ಸಾಗಾಟ : ಪ್ರಿಯಾಂಕ್ ಖರ್ಗೆ ಆಪ್ತ ಲಿಂಗರಾಜ್ ಕಾಂಗ್ರೆಸ್‌ನಿಂದ ಉಚ್ಚಾಟನೆ
ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ್ ಅವರು ಲಿಂಗರಾಜ ಕಣ್ಣಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಡ್ರಗ್ಸ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರಿಂದ ಬಂಧಿತರಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಹಾಗೂ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ್ ಅವರು ಲಿಂಗರಾಜ ಕಣ್ಣಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಜಗದೇವ್ ಗುತ್ತೇದಾರ್ ಹೇಳಿಕೆಯಲ್ಲಿ, "ಪಕ್ಷದ ಘನತೆ ಮತ್ತು ಕಾನೂನಿನ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಲಿಂಗರಾಜ ಕಣ್ಣಿ ಅವರಿಗೆ ಕಾಂಗ್ರೆಸ್ ಪಕ್ಷದ ಯಾವುದೇ ಸ್ಥಾನಮಾನಗಳು ಅಥವಾ ಸದಸ್ಯತ್ವವು ಇನ್ನು ಮುಂದೆ ಇರುವುದಿಲ್ಲ," ಎಂದು ಸ್ಪಷ್ಟಪಡಿಸಿದ್ದಾರೆ.
ಲಿಂಗರಾಜ ಕಣ್ಣಿ ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಿಷೇಧಿತ 120 ಕೊಡೆನೈನ್ ಸಿರಪ್‌ನೊಂದಿಗೆ ಮಾದಕ ದ್ರವ್ಯ ಮಾರಾಟ ಮಾಡುವ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಮುಂಬೈ ಪೊಲೀಸರು NDPS (ನಾರ್ಕೋಟಿಕ್ ಡ್ರಗ್ಸ್ ಅಂಡ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್) ಕಾಯ್ದೆಯಡಿ ಲಿಂಗರಾಜ ಕಣ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಿಂದಾಗಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಶುರುವಾಗಿದೆ.