ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ; ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
x

ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ; ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಈದ್ ಮಿಲಾದ್ ಉಲ್ ನಬಿ ಮೆರವಣಿಗೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ 12 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಡಿದಾಡಿತ್ತು.


ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ 'ಈದ್ ಮಿಲಾದ್ ಉಲ್ ನಬಿ' ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ.

ಈದ್ ಮಿಲಾದ್ ಉಲ್ ನಬಿ ಮೆರವಣಿಗೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ 12 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಡಿದಾಡಿತ್ತು.

ಗಾಂಧಿ ವೃತ್ತದ ಬಳಿ ಯುವಕರ ಗುಂಪು ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

“ಘಟನೆಯ ವಿಡಿಯೋ ಗಮನಕ್ಕೆ ಬಂದಿದೆ. ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಡ್ರೋನ್ ದೃಶ್ಯ, ಸಿಸಿಟಿವಿ ದಾಖಲೆ ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಶೀಘ್ರದಲ್ಲೇ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿದ್ದಾರೆ.

ಈ ನಡುವೆ, ದೇಶದ್ರೋಹದ ಘೋಷಣೆ ಕೂಗಿದವರ ವಿರುದ್ಧ ತಕ್ಷಣ ಕಠಿಣ ಕ್ರಮ ಜರುಗಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, “ದೇಶದ ಅನ್ನ ತಿಂದು, ಗಾಳಿ ಉಸಿರಾಡಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವುದು ನಾಚಿಕೆಗೇಡು. ಸರ್ಕಾರವು ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಮದ್ದೂರು ಪ್ರಕರಣದ ಬೆನ್ನಲ್ಲೇ ಭದ್ರಾವತಿಯಲ್ಲಿ ದೇಶದ್ರೋಹದ ಘೋಷಣೆ ಕೂಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪೊಲೀಸರು ತಣಿಖೆ ತೀವ್ರಗೊಳಿಸಿದ್ದಾರೆ.

Read More
Next Story