Protecting religion is our duty: DCM D.K. Shivakumar
x

ಧರ್ಮಸ್ಥಳದಲ್ಲಿ ಧರ್ಮ ರಕ್ಷಣೆಯ ಮಹತ್ವ ಸಾರಿದ ಡಿಸಿಎಂ ಡಿ.ಕೆ. ಶಿವಕುಮಾರ್

ಡಿ.ಕೆ. ಶಿವಕುಮಾರ್ ಅವರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಶಾಂತಿ, ಸಮೃದ್ಧಿ ಮತ್ತು ಒಳಿತಿಗಾಗಿ ಪ್ರಾರ್ಥಿಸಿದರು ಎಂದು ಅವರ ಆತ್ಮೀಯ ಮೂಲಗಳು ತಿಳಿಸಿವೆ.


ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಪ್ರಮುಖ ನಾಯಕ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾನುವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಆ ಬಳಿಕ ಅವರು ಧರ್ಮ ರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ. "ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಶಾಂತಿ, ಸಮೃದ್ಧಿ ಮತ್ತು ಒಳಿತಿಗಾಗಿ ಪ್ರಾರ್ಥಿಸಿದರು. ಧರ್ಮಸ್ಥಳವು ಕೇವಲ ಧಾರ್ಮಿಕ ಕೇಂದ್ರವಾಗಿರದೆ, ಸಾಮಾಜಿಕ ಸೇವೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಸಂಸ್ಥೆಯಾಗಿದೆ ಎಂದು ಶಿವಕುಮಾರ್ ಕೊಂಡಾಡಿದರು. ಈ ವೇಳೆ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳನ್ನು ಭೇಟಿಯಾದರು.

ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರೊಂದಿಗೆ ಅವರು ಚರ್ಚೆ ನಡೆಸಿದ್ದು, ಶಿಕ್ಷಣ, ಆರೋಗ್ಯ, ಮತ್ತು ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಬಗ್ಗೆ ವಿಚಾರ ವಿನಿಮಯ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

"ಕರಾವಳಿ ನಮ್ಮ ರಾಜ್ಯದ ಮುಖ್ಯವಾದ ಅಂಗ. ಮನುಷ್ಯನಿಗೆ ದೇಹದ ಅಂಗಗಳು ಎಷ್ಟು ಮುಖ್ಯವೋ, ಕರಾವಳಿ ಭಾಗವೂ ಅಷ್ಟೇ ಮುಖ್ಯ" ಎಂದು ಅವರು ಹೇಳಿದರು.

Read More
Next Story