ಕೆಎಸ್‌ಡಿಸಿಎಲ್‌ನಿಂದ ಸರ್ಕಾರಕ್ಕೆ 135 ಕೋಟಿ ರೂ. ಲಾಭಾಂಶದ ಚೆಕ್ ಹಸ್ತಾಂತರ
x

 ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. 

ಕೆಎಸ್‌ಡಿಸಿಎಲ್‌ನಿಂದ ಸರ್ಕಾರಕ್ಕೆ 135 ಕೋಟಿ ರೂ. ಲಾಭಾಂಶದ ಚೆಕ್ ಹಸ್ತಾಂತರ

ಕೆಎಸ್‌ಡಿಸಿಎಲ್‌ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂ.ವಹಿವಾಟು ನಡೆಸಿ, 451 ಕೋಟಿ ರೂ. ಲಾಭ ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಮುಖ್ಯಮಂತ್ರಿ ನಿಧಿಗೆ ನೀಡಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.


Click the Play button to hear this message in audio format

ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು 2024-25ನೇ ಸಾಲಿನ ಲಾಭಾಂಶದಲ್ಲಿ 135 ಕೋಟಿ ರೂ.ಗಳನ್ನು ಶುಕ್ರವಾರ ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿತು.

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಕೆಎಸ್‌ಡಿಸಿಎಲ್‌ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಲಾಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಎಂ.ಬಿ.ಪಾಟೀಲ್‌ ಮಾತನಾಡಿ, ಕೆಎಸ್‌ಡಿಸಿಎಲ್‌ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂ.ವಹಿವಾಟು ನಡೆಸಿ, 451 ಕೋಟಿ ರೂ. ಲಾಭ ಗಳಿಸಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರ್ಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.

2022-23ರಲ್ಲಿ ಬಿಜೆಪಿ ಸರ್ಕಾರವಿದ್ದಾಗ ಸಂಸ್ಥೆಯ ವತಿಯಿಂದ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More
Next Story