ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ರಾಧಾಮೋಹನ್ ದಾಸ್ ಅಗರ್ವಾಲ್ ನೇಮಕ
x

ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ರಾಧಾಮೋಹನ್ ದಾಸ್ ಅಗರ್ವಾಲ್ ನೇಮಕ


ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ಬದಲಾವಣೆ ಮಾಡಲಾಗಿದೆ. ಈ ಹಿಂದೆ ಉಸ್ತುವಾರಿಯಾಗಿದ್ದ ಅರುಣ್​ ಸಿಂಗ್ ಅವರಿಗೆ ಕೊಕ್ ನೀಡಿ ಇದೀಗ, ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿಯನ್ನಾಗಿ ಹೈಕಮಾಂಡ್ ನೇಮಕ ಮಾಡಿದೆ.

ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಇದೀಗ ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ.

ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದು, ಕರ್ನಾಟಕದ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕ ಮಾಡಲಾಗಿದೆ.

ಲೋಕಸಭಾ ಚುನಾವಣೆ ವೇಳೆ ರಾಜ್ಯ ಬಿಜೆಪಿಯಲ್ಲಿ ಸ್ಫೋಟಗೊಂಡಿದ್ದ ಅಸಮಾಧಾನವನ್ನು ಶಮನ ಮಾಡುವಲ್ಲಿ ರಾಧಮೋಹನ್ ದಾಸ್ ಅಗರ್ವಾಲ್‌ ಅವರು ಪ್ರಮುಖ ಪಾತ್ರ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಸೇರಿಕೊಂಡು ಅಸಮಾಧಾನಗೊಂಡಿದ್ದ ನಾಯಕರನ್ನು ಸಮಾಧಾನ ಮಾಡಿದ್ದರು. ಅದರಲ್ಲೂ ಪ್ರಮುಖವಾಗಿ ಟಿಕೆಟ್ ವಂಚಿತದಿಂದ ಬೇಸರಗೊಂಡಿದ್ದ ಪ್ರತಾಪ್ ಸಿಂಹ, ಸಂಗಣ್ಣ ಕರಡಿ, ಸದಾನಂದಗೌಡ ಸೇರಿದಂತೆ ಇತರೆ ನಾಯಕರನ್ನು ಕರೆದು ಮಾತನಾಡಿದ್ದರು.

ಉತ್ತರ ಕನ್ನಡ, ಬೆಳಗಾವಿ, ರಾಯಚೂರು ಲೋಕಸಭಾ ಕ್ಷೇತ್ರದ ಟಿಕೆಟನ್ನು ಹೈಕಮಾಂಡ್​ ನಾಯಕರ ಜೊತೆ ಚರ್ಚಿಸಿ ಅಂತಿಮಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹೈಕಮಾಂಡ್​, ಅರುಣ್ ಸಿಂಗ್ ಅವರನ್ನು ಬದಲಾಯಿಸಿ ರಾಧಮೋಹನ್ ದಾಸ್ ಪ್ರ ಅವರನ್ನೇ ಕರ್ನಾಟಕ ಬಿಜೆಪಿ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

Read More
Next Story