
ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಹಾರಕ್ಕೆ ಪ್ರಯಾಣ ಬೆಳೆಸಿದರು.
ರಾಹುಲ್ 'ವೋಟ್ ಅಧಿಕಾರ ಯಾತ್ರೆ'ಗೆ ಡಿಕೆಶಿ ನೇತೃತ್ವದಲ್ಲಿ ಬಿಹಾರಕ್ಕೆ ಹಾರಿದ ಶಾಸಕರ ದಂಡು
'ವೋಟ್ ಅಧಿಕಾರ ಯಾತ್ರೆ'ಯು ಮತದಾರರ ಹಕ್ಕುಗಳ ಜಾಗೃತಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಯ ಗುರಿಯನ್ನು ಹೊಂದಿದೆ ಎನ್ನಲಾಗಿದ್ದು, ಇದರಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರೀಯ ನಾಯಕತ್ವದೊಂದಿಗೆ ಹೆಜ್ಜೆ ಹಾಕಲು ರಾಜ್ಯ ಘಟಕ ಮುಂದಾಗಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ಮಹತ್ವದ 'ವೋಟ್ ಅಧಿಕಾರ ಯಾತ್ರೆ'ಗೆ ಶಕ್ತಿ ತುಂಬಲು, ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದಾಳತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಬೃಹತ್ ನಿಯೋಗವು ಶನಿವಾರ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಿಹಾರಕ್ಕೆ ಪ್ರಯಾಣ ಬೆಳೆಸಿತು.
ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷವು ಆಯೋಜಿಸಿರುವ ಈ ಯಾತ್ರೆಗೆ ಕರ್ನಾಟಕದಿಂದ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವ ಉದ್ದೇಶದಿಂದ ಈ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ. 'ವೋಟ್ ಅಧಿಕಾರ ಯಾತ್ರೆ'ಯು ಮತದಾರರ ಹಕ್ಕುಗಳ ಜಾಗೃತಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಯ ಗುರಿಯನ್ನು ಹೊಂದಿದೆ ಎನ್ನಲಾಗಿದ್ದು, ಇದರಲ್ಲಿ ಭಾಗವಹಿಸುವ ಮೂಲಕ ರಾಷ್ಟ್ರೀಯ ನಾಯಕತ್ವದೊಂದಿಗೆ ಹೆಜ್ಜೆ ಹಾಕಲು ರಾಜ್ಯ ಘಟಕ ಮುಂದಾಗಿದೆ.
ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಈ ತಂಡದಲ್ಲಿ ಶಾಸಕರಾದ ಶ್ರೀನಿವಾಸ ಮಾನೆ, ಬಾಬಾಸಾಹೇಬ್ ಪಾಟೀಲ್, ರಾಜು ಸೇಠ್, ರಿಜ್ವಾನ್ ಅರ್ಷದ್, ಬಿ.ಎಂ. ನಾಗರಾಜ್, ನಯನಾ ಮೋಟಮ್ಮ, ಅಶೋಕ್ ಪಟ್ಟಣ್, ಆನಂದ್ ಕಡೂರ್, ವೇಣುಗೋಪಾಲ್ ನಾಯಕ್, ಬಸನಗೌಡ ಬಾದರ್ಲಿ ಅವರಂತಹ ಪ್ರಮುಖ ಶಾಸಕರಿದ್ದಾರೆ. ಇವರೊಂದಿಗೆ, ರಾಷ್ಟ್ರೀಯ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಇದ್ದರು.