Rain Alert | ಇಂದಿನಿಂದ ಮತ್ತೆ 3 ದಿನ ಭಾರೀ ಮಳೆ ಮುನ್ಸೂಚನೆ
x
ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ.

Rain Alert | ಇಂದಿನಿಂದ ಮತ್ತೆ 3 ದಿನ ಭಾರೀ ಮಳೆ ಮುನ್ಸೂಚನೆ

ರಾಜ್ಯಧಾನಿ ಬೆಂಗಳೂರು ಸೇರಿದಂತೆ ಆ.6 ರಿಂದ ಆ.12ರವರೆಗೂ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಮುಂದಿನ 3 ದಿನಗಳ ಕಾಲ ಮುಂಗಾರು ಮಳೆ ಮತ್ತಷ್ಟು ಅಬ್ಬರ ತೋರಿಸಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.


Click the Play button to hear this message in audio format

ರಾಜ್ಯಧಾನಿ ಬೆಂಗಳೂರು ಸೇರಿದಂತೆ ಆ.6 ರಿಂದ ಆ.12ರವರೆಗೂ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಮುಂದಿನ 3 ದಿನಗಳ ಕಾಲ ಮುಂಗಾರು ಮಳೆ ಮತ್ತಷ್ಟು ಅಬ್ಬರ ತೋರಿಸಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕೊಡಗಿನಲ್ಲಿ ಮಳೆ ಇಳಿಮುಖ

ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಕಡಿಮೆಯಾಗಿದ್ದು, ಜುಲೈ ತಿಂಗಳಿನಲ್ಲಿ ಬಿಡುವು ನೀಡದಂತೆ ಸುರಿದು ಪ್ರವಾಹ ಪರಿಸ್ಥಿತಿ ಉಂಟು ಮಾಡಿದ್ದ ಮಳೆ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ವಿರಾಮ ಪಡೆದಿದೆ. ಉತ್ತಮವಾಗಿ ಮಳೆಯಾದ ಕಾರಣ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಚುರುಕಾಗಿ ಸಾಗಿವೆ. ನದಿ, ಹಳ್ಳ-ಕೊಳ್ಳಗಳಲ್ಲಿ ನೀರಿನ ಅಬ್ಬರ ಕಡಿಮೆಯಾಗಿದೆ.

ವಿನಾಶಕಾರಿ ಮಳೆ ನಿಲ್ಲಿಸುವಂತೆ ದೇವರಿಗೆ ಪೂಜೆ

ಚಿಕ್ಕಮಗಳೂರು ನಗರದ ಸ್ಥಳೀಯರು ಮಳೆ ತಗ್ಗುವಂತೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಲೆನಾಡು ಭಾಗದಲ್ಲಿರುವ ಚಿಕ್ಕಮಗಳೂರಿನಲ್ಲಿ ಮಳೆಯಿಂದಾಗಿ ನಾಗರಿಕರಿಗೆ ಭಾರಿ ತೊಂದರೆಯಾಗಿದೆ. ಈ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನಿವಾಸಿಗಳನ್ನು ಅಪಾಯಕ್ಕೆ ತಳ್ಳುತ್ತಿದೆ. ಕಳಸ, ಹೊರನಾಡು, ಶೃಂಗೇರಿ, ಕೊಪ್ಪ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಬೆಳೆ ಹಾಗೂ ಜಮೀನು ನಾಶವಾಗಿದೆ. ಇಂತಹ ವಿಪರೀತ ಪರಿಸ್ಥಿತಿಯಿಂದಾಗಿ ಕಳಸ ಮತ್ತು ಸುತ್ತಮುತ್ತಲಿನ ಜನರು ಕಲಶೇಶ್ವರ ದೇವರಿಗೆ ಅಗಿಲು ಸೇವಾ ಪೂಜೆಯನ್ನು ನೆರವೇರಿಸಿ, ವಿನಾಶಕಾರಿ ಮಳೆಯನ್ನು ನಿಲ್ಲಿಸುವಂತೆ ದೇವರನ್ನು ಕೋರಿದ್ದಾರೆ. ಅಗಿಲು ಸೇವಾ ಪೂಜೆಯು ಕರ್ನಾಟಕದ ಮಲೆನಾಡು ಪ್ರದೇಶದಲ್ಲಿ ಆಚರಣೆಯಲ್ಲಿರುವ ವಿಶೇಷ ಪೂಜೆಯಾಗಿದೆ.

ಕಳಸ ತಾಲೂಕಿನ ನೂರಾರು ಗ್ರಾಮಸ್ಥರು ಕಳಸೇಶ್ವರ ದೇವಸ್ಥಾನದಲ್ಲಿ ಕಲಶೇಶ್ವರ ದೇವರ ಪೂಜೆಯಲ್ಲಿ ತೊಡಗಿದ್ದರು. ಸತತವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಅದರಿಂದಾಗುವ ಅನಾಹುತಗಳ ನಿವಾರಣೆಗಾಗಿ ಪ್ರಾರ್ಥಿಸಿದರು.

Read More
Next Story