
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
Rain Alert| ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆಯ ಮುನ್ಸೂಚನೆ
ಕಳೆದ ಕೆಲವು ದಿನಗಳಿಂದ ರಾಜ್ಯದ ಉಷ್ಣತೆ ಏರಿಕೆಯಾಗುತ್ತಿದ್ದು, ಬಿಸಿಲಿನ ತಾಪಮಾನ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಬಿರುಬಿಸಿಲು ಕಡಿಮೆಯಾಗಿ ಹನಿ ಮಳೆ ತಂಪನ್ನು ತರುವ ನಿರೀಕ್ಷೆಯಿದೆ.
ಬೆಂಗಳೂರು ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 23ರಿಂದ 26ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ತೀವ್ರ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ?
ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕಳೆದ ಕೆಲವು ದಿನಗಳಿಂದ ರಾಜ್ಯದ ಉಷ್ಣತೆ ಏರಿಕೆಯಾಗುತ್ತಿದ್ದು, ಬಿಸಿಲಿನ ತಾಪಮಾನ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಬಿರುಬಿಸಿಲು ಕಡಿಮೆಯಾಗಿ ಹನಿ ಮಳೆ ತಂಪನ್ನು ತರುವ ನಿರೀಕ್ಷೆಯಿದೆ.
ಮಳೆಯ ಪರಿಣಾಮ
ಮಳೆಗಾಲ ಆರಂಭಕ್ಕೂ ಮುನ್ನವೇ ಉರಿಯುತ್ತಿರುವ ಬೇಸಿಗೆಯಲ್ಲಿ ಮಳೆಯಾಗುವುದು ರೈತರಿಗೆ ಅನುಕೂಲವಾಗಲಿದೆ. ದ್ರಾಕ್ಷಿ, ಬಾಳೆ, ಅಡಿಕೆ, ಮೆಕ್ಕೆಜೋಳ ಬೆಳೆಗಳಿಗೆ ಸೀಮಿತ ಪ್ರಮಾಣದ ಮಳೆ ಲಾಭಕರವಾಗಲಿದೆ. ಆದರೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಆದರೆ ರಾಜ್ಯದಲ್ಲಿ ಬೇಸಿಗೆ ಶಾಖದಿಂದ ಕಂಗೆಟ್ಟ ಜನರಿಗೆ ಈ ಮಳೆ ಸ್ವಲ್ಪ ಮಟ್ಟಿಗೆ ತಂಪನ್ನು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.