
ರಾಜ್ಯದಲ್ಲಿ ಮಳೆ ಕೊಂಚ ಬಿಡುವು ನೀಡಿದೆ.
Weather Update| ಕರ್ನಾಟಕದಲ್ಲಿ ಮುಂದಿನ 6 ದಿನಗಳ ಕಾಲ ಭಾರೀ ಮಳೆ ಮುಂದುವರಿಕೆ: ಎಲ್ಲೆಲ್ಲಿ ಜೋರು ಮಳೆ? ಇಲ್ಲಿದೆ ವಿವರ
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇನ್ನೂ 6 ದಿನ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಹವಮಾನ ಬದಲಾವಣೆಗಳು ಮತ್ತು ಮಾನ್ಸೂನ್ ಪರಿಣಾಮದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಮಾನ್ಸೂನ್ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
-ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಧಾರವಾಡ, ಹುಬ್ಬಳ್ಳಿ, ದಾವಣಗೆರೆ, ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಆಗಾಗ ತುಂತುರು ಮಳೆಯಾಗಬಹುದು.
ಮೈಸೂರು, ಕೊಡಗು, ಶಿವಮೊಗ್ಗ, ಬೀದರ್, ಬಾಗಲಕೋಟೆ, ಕಲಬುರಗಿ, ಬೆಳಗಾವಿ, ಯಾದಗಿರಿ, ಮತ್ತು ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಿಂದಾಗಿ ರೈತರಿಗೆ ಅನುಕೂಲವಾಗಲಿದ್ದು, ಜಲಾಶಯಗಳ ನೀರಿನ ಮಟ್ಟವೂ ಏರಿಕೆಯಾಗುವ ಸಾಧ್ಯತೆ ಇದೆ.
ಸಿದ್ಧತೆಗಳು
ನಿರಂತರ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಜನಜೀವನಕ್ಕೆ ಅಲ್ಪ ಪ್ರಮಾಣದ ಅಡ್ಡಿಯಾಗಬಹುದು. ನಗರ ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ನಿಲ್ಲುವುದು, ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿವೆ. ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಮಳೆಗಾಲಕ್ಕೆ ಸಂಬಂಧಿಸಿದ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.