Cyclone Montha makes landfall, yellow alert declared for 12 districts of the state
x

ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಮುಂದುವರಿದ ಮಳೆ ಮತ್ತು ಚಳಿಯ ಆರ್ಭಟ: ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ.


Click the Play button to hear this message in audio format

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಹವಾಮಾನದಲ್ಲಿ ಮತ್ತೆ ವೈಪರೀತ್ಯ ಕಂಡುಬಂದಿದ್ದು, ಮುಂದಿನ ಮೂರು-ನಾಲ್ಕು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಹಾಗೂ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ವಾಯುಭಾರ ಕುಸಿತದ ನೇರ ಪ್ರಭಾವ ಕರಾವಳಿ ಜಿಲ್ಲೆಗಳ ಮೇಲೆ ಹೆಚ್ಚಾಗಿ ಕಂಡುಬರಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಇದರೊಂದಿಗೆ ಮಲೆನಾಡು ಮತ್ತು ದಕ್ಷಿಣದ ಇತರ ಜಿಲ್ಲೆಗಳಾದ ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ ಮತ್ತು ಚಿಕ್ಕಮಗಳೂರು ಭಾಗಗಳಲ್ಲಿಯೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ತಾಪಮಾನದಲ್ಲಿ ಇಳಿಕೆ

ಮೋಡ ಕವಿದ ವಾತಾವರಣ ಮತ್ತು ಮಳೆಯ ಕಾರಣದಿಂದಾಗಿ ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗುವ ಸಾಧ್ಯತೆಯಿದೆ. ಇದರಿಂದಾಗಿ ಹಗಲಿನಲ್ಲಿಯೂ ತಂಪಾದ ವಾತಾವರಣ ನಿರ್ಮಾಣವಾಗಲಿದ್ದು, ಚಳಿಯ ಅನುಭವ ಹೆಚ್ಚಾಗಲಿದೆ.

ರಾಜಧಾನಿಯಲ್ಲಿ 'ಕೂಲ್' ವಾತಾವರಣ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಮುಂಜಾನೆ ಮತ್ತು ರಾತ್ರಿ ವೇಳೆ ಚಳಿಯ ತೀವ್ರತೆ ಹೆಚ್ಚಿರಲಿದ್ದು, ಹಗಲಿನಲ್ಲಿ ಸೂರ್ಯನ ದರ್ಶನ ಕಡಿಮೆಯಾಗುವ ಸಾಧ್ಯತೆ ಇದೆ.

ದಕ್ಷಿಣದಲ್ಲಿ ಮಳೆಯ ವಾತಾವರಣವಿದ್ದರೆ, ಉತ್ತರ ಕರ್ನಾಟಕದಲ್ಲಿ ಚಳಿಯ ಪ್ರಮಾಣ ಏರಿಕೆಯಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಬೆಳಗಾವಿ, ಕಲಬುರಗಿ ಮತ್ತು ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶೀತಗಾಳಿಯ ಪ್ರಭಾವ ಹೆಚ್ಚಾಗಲಿದೆ. ಕನಿಷ್ಠ ತಾಪಮಾನದಲ್ಲಿ ಗಣನೀಯ ಕುಸಿತ ಕಂಡುಬರುತ್ತಿದ್ದು, ರಾತ್ರಿ ಮತ್ತು ಬೆಳಗಿನ ಜಾವ ವಿಪರೀತ ಚಳಿ ಇರಲಿದೆ. ಹೀಗಾಗಿ, ಈ ಭಾಗದ ಜನರು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಆರೋಗ್ಯದ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

Read More
Next Story