ಮಳೆ ಮುನ್ಸೂಚನೆ | ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ವರದಿ
x
ಕರ್ನಾಟಕದಲ್ಲಿ ಮಳೆ

ಮಳೆ ಮುನ್ಸೂಚನೆ | ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ವರದಿ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲೂ ಈ ವಾರ ಮಳೆಯಾಗಲಿದೆ. ಉಳಿದಂತೆ ಆರು ದಿನ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಸೇರಿದಂತೆ ರಾಜ್ಯದ ಕೆಲವು ಕಡೆ ಬುಧವಾರ ಸಾಧಾರಣ ಮಳೆಯಾಗಿದ್ದು, ಇನ್ನು ಆರು ದಿನ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುರುವಾರ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ, ರಾಯಚೂರು, ಗದಗ, ಹಾವೇರಿ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏ.12ಕ್ಕೆ ಬೀದರ್, ಕಲಬುರಗಿ , ವಿಜಯಪುರ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ರಾಯಚೂರು, ಗದಗ, ಕೊಪ್ಪಳ, ಕೊಡಗು, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ವಿಜಯನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಏ.13ಕ್ಕೆ ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗ, ಕೊಡಗು, ಮೈಸೂರು, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ ಭಾಗದಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲೂ ಏ.13ಕ್ಕೆ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ಈ ವೇಳೆ ತಾಪಮಾನ ಮತ್ತಷ್ಟು ಇಳಿಕೆ ಆಗುವ, ತಂಪು ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಏ.14ಕ್ಕೆ ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ರಾಯಚೂರು, ವಿಜಯಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮಳೆಯಾಗಲಿದ್ದು, ಕರಾವಳಿ ಭಾಗದಲ್ಲಿ ಒಣಹವೆ ಇರಲಿದೆ.

ಏ.15ಕ್ಕೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಧಾರವಾಡ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಏ.16ಕ್ಕೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಧಾರವಾಡ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಶಿವಮೊಗ್ಗ ಹಾಗೂ ದಾವಣಗೆರೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಬಿಸಿಲ ಝಳ

ಮುಂದಿನ ಮೂರು ದಿನಗಳ ಕಾಲ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಹೆಚ್ಚಾಗಲಿದೆ. ಆದರೆ, ಶಾಖದ ಅಲೆಯ ಎಚ್ಚರಿಕೆ ಇಲ್ಲ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

Read More
Next Story