
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಖಾಸಗಿ ಬಸ್ ಮಾಲೀಕರ ತಡೆಯಾಜ್ಞೆಯಿಂದ ಕೆಎಸ್ಆರ್‌ಟಿಸಿ ಸಂಚಾರಕ್ಕೆ ವಿಘ್ನ: ಸಚಿವ ರಾಮಲಿಂಗಾ ರೆಡ್ಡಿ
ಈ ಎರಡೂ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳ ಪಾರುಪತ್ಯ ಹೆಚ್ಚಾಗಿದ್ದು, ಸಾರಿಗೆ ಇಲಾಖೆಯು ಹೊಸ ಪರ್ಮಿಟ್ ಪಡೆದು ಬಸ್ ಓಡಿಸಲು ಮುಂದಾದಾಗಲೆಲ್ಲಾ ಮಾಲೀಕರು ಕಾನೂನು ಹೋರಾಟದ ಮೂಲಕ ಅಡ್ಡಿಪಡಿಸುತ್ತಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾರ್ವಜನಿಕರಿಂದ ಸರ್ಕಾರಿ ಬಸ್‌ಗಳ ಸಂಚಾರಕ್ಕೆ ಭಾರೀ ಬೇಡಿಕೆ ಇದ್ದರೂ, ಖಾಸಗಿ ಬಸ್ ಮಾಲೀಕರು ನ್ಯಾಯಾಲಯದ ಮೂಲಕ ತರುತ್ತಿರುವ ತಡೆಯಾಜ್ಞೆಗಳಿಂದ ಹೊಸ ಬಸ್‌ಗಳನ್ನು ಓಡಿಸಲು ಸಾಧ್ಯವಾಗುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೈಂದೂರಿನಲ್ಲಿ ನೂತನ ಕೆಎಸ್ಆರ್‌ಟಿಸಿ (KSRTC) ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದರು.
ಈ ಎರಡೂ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳ ಪಾರುಪತ್ಯ ಹೆಚ್ಚಾಗಿದ್ದು, ಸಾರಿಗೆ ಇಲಾಖೆಯು ಹೊಸ ಪರ್ಮಿಟ್ ಪಡೆದು ಬಸ್ ಓಡಿಸಲು ಮುಂದಾದಾಗಲೆಲ್ಲಾ ಮಾಲೀಕರು ಕಾನೂನು ಹೋರಾಟದ ಮೂಲಕ ಅಡ್ಡಿಪಡಿಸುತ್ತಿದ್ದಾರೆ. ಇದರಿಂದಾಗಿ ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಬಸ್ ಸೌಲಭ್ಯ ಒದಗಿಸಲು ಸಮಸ್ಯೆಯಾಗುತ್ತಿದೆ ಎಂದು ಅವರು ಹೇಳಿದರು.
ಪಕ್ಷಾತೀತ ಬೆಂಬಲವಿದ್ದರೂ ಕಾನೂನು ತೊಡಕು
ವಿಶೇಷವೆಂದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಶಾಸಕರು ಪಕ್ಷಾತೀತವಾಗಿ ಸರ್ಕಾರಿ ಬಸ್‌ಗಳ ಅವಶ್ಯಕತೆಯ ಬಗ್ಗೆ ಸಹಮತ ವ್ಯಕ್ತಪಡಿಸಿದ್ದಾರೆ. "ಜನರ ಬೇಡಿಕೆಯಂತೆ ಬಸ್ ಓಡಿಸಲು ಇಲಾಖೆ ಸಿದ್ಧವಿದೆ. ಪದೇ ಪದೇ ಕೋರ್ಟ್‌ಗೆ ಹೋಗುತ್ತಿರುವ ಖಾಸಗಿ ಬಸ್ ಮಾಲೀಕರ ನಿಲುವಿನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ನಿವಾರಿಸಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ಸಚಿವರು ಭರವಸೆ ನೀಡಿದರು.

