ಮುಂದುವರಿದ ಮಳೆ | ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಬಿರುಗಾಳಿ ಸಹಿತ ಮಳೆ ಮುನ್ನೆಚ್ಚರಿಕೆ
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಶುಕ್ರವಾರ(ಆ.30) ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್, ಕಲಬುರಗಿ, ಬೆಳಗಾವಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಪಣಂಬೂರು, ಮಾಣಿ, ಶಿರಾಲಿ, ಗೇರುಸೊಪ್ಪ, ಪುತ್ತೂರು, ಕುಂದಾಪುರ, ಮಂಕಿ, ಸಿದ್ದಾಪುರ, ಕೊಟ್ಟಿಗೆಹಾರ, ಭಾಗಮಂಡಲ, ಕೊಲ್ಲೂರು, ಹೊನ್ನಾವರ, ಕ್ಯಾಸಲ್ರಾಕ್, ಮಂಗಳೂರು, ಕೋಟ, ಸುಳ್ಯ, ಮುಲ್ಕಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.
ಆಗುಂಬೆ, ಜಯಪುರ, ಕಳಸ, ಶೃಂಗೇರಿ, ಕೊಪ್ಪ, ಕುಮಟಾ, ಸಕಲೇಶಪುರ, ಬನವಾಸಿ, ಗೋಕರ್ಣ, ಲೋಂಡಾ, ಹುಂಚದಕಟ್ಟೆ, ಬಾಳೆಹೊನ್ನೂರು, ಕಮ್ಮರಡಿ, ನಾಪೋಕ್ಲು, ಮೂರ್ನಾಡು, ಕಾರವಾರ, ಯಲ್ಲಾಪುರ, ಕೂಡಲಸಂಗಮ, ಮೂಡಿಗೆರೆ, ಆನವಟ್ಟಿ, ತ್ಯಾಗರ್ತಿ, ಎನ್ಆರ್ಪುರ, ಹಾಸನ, ಹಾರಂಗಿ, ತರೀಕೆರೆ, ತಿಪಟೂರು, ಶ್ರವಣಬೆಳಗೊಳ, ಕುಶಾಲನಗರದಲ್ಲಿ ಮಳೆಯಾಗಿದೆ.